ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಪೋಸ್ಟರ್ ವಾರ್ ಮತ್ತೆ ಜೋರಾಗುತ್ತಿದೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಒಂದನ್ನು ರಿಲೀಸ್ ಮಾಡಿರುವ ಬಿಜೆಪಿ, ಡಿ.ಕೆ. ಶಿವಕುಮಾರ್ ಅವರನ್ನು ಜೈಲಿನಲ್ಲಿರುವಂತೆ ಬಿಂಬಿಸಿದೆ. ಈ ಪೋಸ್ಟ್ಗೆ ಒಂದು ಆಕರ್ಷಕ ಟೈಟಲ್ ನೀಡಲಾಗಿದೆ.
ಡಿ.ಕೆ. ಶಿವಕುಮಾರ್ ಅವರ ಕೊರಳಿಗೆ ‘ಸ್ವಯಂ ಘೋಷಿತ ನಿರಪರಾಧಿ’ ಎಂಬ ಬೋರ್ಡ್ ಅನ್ನು ಹಾಕಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವ ಸಂಪುಟದ ಸದಸ್ಯರು ಹೊರಗಡೆ ಕುಳಿತಿರುವ ಪೋಸ್ಟರ್ ಹಂಚಿಕೊಂಡಿದೆ.
ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಇರುವ ಕಾಂಗ್ರೆಸ್ ಸರ್ಕಾರ ಎಂದು ಬರೆದು ಕಾಂಗ್ರೆಸ್ ಸರ್ಕಾರವನ್ನು ಲೇವಡಿ ಮಾಡಿದೆ. ಕಾಂಗ್ರೆಸ್ನ ಭ್ರಷ್ಟಾಚಾರ, ಗೂಂಡಾಗಳ ಮಹಾಪೋಷಕರು ಮುಖ್ಯಮಂತ್ರಿ ಸಿದ್ದರಾಮಯ್ಯ. ಭ್ರಷ್ಟರ ಪಾಲಿನ ಆಲದಮರ ಹಾಗೂ ಪೋಷಕ. ಡಿ.ಕೆ. ಶಿವಕುಮಾರ್ ಅವರನ್ನು 380 ಪಟ್ಟು ಅಕ್ರಮ ಆಸ್ತಿ ಪ್ರಕರಣದಿಂದ ಪಾರು ಮಾಡಿದ್ದೇ ಈ ಭ್ರಷ್ಟ ಪೋಷಕ ಎಂದು ವಾಗ್ದಾಳಿ ನಡೆಸಿದೆ.