ಬೆಂಗಳೂರು:- ಕರ್ನಾಟಕದಲ್ಲಿ ದಿನನಿತ್ಯ ಹಗಲು ದರೋಡೆಯಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಸವರಾಜ್ ಬೊಮ್ಮಾಯಿ ಆಕ್ರೋಶ ಹೊರ ಹಾಕಿದ್ದಾರೆ.
ಮಂಡ್ಯದಲ್ಲಿ ಸಮಗ್ರ ಕೃಷಿ ವಿಶ್ವವಿದ್ಯಾಲಯಕ್ಕೆ ಸಚಿವ ಸಂಪುಟ ಅನುಮೋದನೆ ; ಸಾಕಾರಗೊಂಡ ದಶಕಗಳ ಕನಸು!
ಈ ಸಂಬಂಧ ಮಾತನಾಡಿದ ಅವರು, ರಾಜ್ಯ ಜಂಗಲ್ ಆಗಿದೆ, ಆಡಳಿತ ನಡೆಸುವವರು ಕುರ್ಚಿಗಾಗಿ ಕಿತ್ತಾಟ ನಡೆಸುವುದರಲ್ಲಿ ನಿರತರಾಗಿದ್ದಾರೆ ಎಂದರು. ರಾಜ್ಯದಲ್ಲಿ ದಿನನಿತ್ಯ ಹಗಲು ದರೋಡೆಯಾಗುತ್ತಿದೆ. ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದು, ಅಪರಾಧ ಮಾಡುವವರಿಗೆ ಯಾರದ್ದೂ ಭಯವಿಲ್ಲದಂತಾಗಿದೆ. ಈ ಸರ್ಕಾರದ ಅವಧಿಯಲ್ಲಿ ಮೂಕ ಪ್ರಾಣಿಗಳು, ಮನುಷ್ಯರು, ಯಾರಿಗೂ ರಕ್ಷಣೆ ಇಲ್ಲದಂತಾಗಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ದಿನನಿತ್ಯ ಹಗಲು ದರೋಡೆ, ಪುಟ್ಟ ಮಕ್ಕಳ ಮೇಲೆ ಅತ್ಯಾಚಾರದಂತ ಅಪರಾಧ ಕೃತ್ಯಗಳು ರಾಜಾರೋಷವಾಗಿ ನಡೆಯುತ್ತಿದ್ದು, ಆಡಳಿತ ನಡೆಸುವವರು ಕುರ್ಚಿಗಾಗಿ ಕಿತ್ತಾಟ ನಡೆಸುವುದರಲ್ಲಿ ನಿರತರಾಗಿದ್ದು, ಸರ್ಕಾರಕ್ಕೆ ಪೊಲೀಸರ ಮೇಲೆ ನಿಯಂತ್ರಣ ಇಲ್ಲದಂತಾಗಿದೆ. ಪೊಲಿಸರಿಗೆ ಕ್ರಿಮಿನಲ್ ಗಳ ಮೇಲೆ ನಿಯಂತ್ರಣ ಇಲ್ಲದಂತಾಗಿದ್ದು, ಅಪರಾಧ ಮಾಡುವವರಿಗೆ ಯಾರ ಭಯವಿಲ್ಲದಂತಾಗಿದೆ. ಇದರಿಂದ ಕರ್ನಾಟಕ ಜಂಗಲ್ ರಾಜ್ಯ ಆಗಿದೆ ಎಂದು ಕಿಡಿಕಾರಿದರು.