ಶಿರಸಿ:- ಯಾರನ್ನೂ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಮಾಡಲು ಆಗದು’ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರ ಕಡೆಗಣನೆ ಮಾಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ’30 ವರ್ಷಗಳಿಂದ ರಾಜಕಾರಣದಲ್ಲಿ ಇರುವ ಹರಿಪ್ರಸಾದ್ ಅವರನ್ನು ಕಡೆಗಣನೆ ಮಾಡುವ ಪ್ರಶ್ನೆಯೇ ಇಲ್ಲ. ಅವರೊಂದಿಗೆ ಚರ್ಚಿಸಲಾಗುವುದು’ ಎಂದರು.
ಬಹಳಷ್ಟು ಹಿರಿಯ ನಾಯಕರಿಗೆ ಸ್ಥಾನ ನೀಡಿಲ್ಲ. ಅವಕಾಶ ಬಂದಾಗ, ಅವರಿಗೂ ಸ್ಥಾನಮಾನ ಸಿಗಲಿದೆ. 25 ಶಾಸಕರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಲಾಗುವುದು. ಹಂತಹಂತವಾಗಿ ಎಲ್ಲರನ್ನೂ ಸಮಾಧಾನ ಮಾಡಲಾಗುವುದು. ಯಾರೂ ಅಸಮಾಧಾನ ಪಡಬೇಕಿಲ್ಲ’ ಎಂದರು.