ಧಾರವಾಡ: ಧಾರವಾಡ ಶಹರ ಠಾಣೆಯ ಪೊಲೀಸ್ ಅಧಿಕಾರಿಯನ್ನು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿಯವರು ಸಾರ್ವಜನಿಕವಾಗಿ ತರಾಟೆಗೆ ತೆಗೆದುಕೊಳ್ಳುವ ಮೂಲಕ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ, ಕೇಂದ್ರ ಸಚಿವರ ವಿರುದ್ಧ ಧಾರವಾಡದಲ್ಲಿ ದಲಿತ ಸಂಘಟನೆಯ ಕಾರ್ಯ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ ಮುಖಂಡರು ಹಾಗೂ ಕಾರ್ಯಕರ್ತರು, ಕೇಂದ್ರ ಸಚಿವರ ನಡೆಯನ್ನು ಖಂಡಿಸಿ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಇತ್ತೀಚೆಗೆ ದೀಪಾವಳಿಯ ಹಬ್ಬದ ದಿನದಂದು ಕೇಂದ್ರ ಸಚಿವರ ನಿವಾಸಕ್ಕೆ ಧಾರವಾಡ ಶಹರ ಠಾಣೆಯ ಪೊಲೀಸ ಅಧಿಕಾರಿ ಕಾಡದೇವರಮಠ ಅವರು ತೆರಳಿದ್ದರು.

ಈ ಸಂದರ್ಭದಲ್ಲಿ ತಮ್ಮ ಕಾರ್ಯಕರ್ತರ ಪರವಾಗಿ ಮಾಧ್ಯಮ ಮುಂದೆ ಪೊಲೀಸ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡು ಅವಮಾನ ಮಾಡಿದ್ದಾರೆ. ಪೊಲೀಸ್ ಅಧಿಕಾರಿ ಕರ್ತವ್ಯ ಲೋಪವಾದಲ್ಲಿ ತನಿಖೆಗೆ ಮಾಡಿಸಬೇಕು. ಅದನ್ನು ಬಿಟ್ಡು ಸಾರ್ವಜನಿಕವಾಗಿ ಈ ರೀತಿ ತರಾಟೆಗೆ ತೆಗೆದುಕೊಲ್ಳುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು. ಜೊತೆಗೆ ಅಧಿಕಾರಿಗಳಿಗೆ ಅವರ ಕರ್ತವ್ಯ ಮಾಡಲು ಜನ್ರತಿನಿಧಿಗಳು ಬೀಡಬೇಕು. ಈ ರೀತಿ ಅವಮಾನ ಮಾಡಬಾರದು ಎಂದು ಅಗ್ರಹಿಸಿದರು.

