ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ಸಿನಿಮಾಗೆ ಗುಡ್ ಬಾಯ್ ಹೇಳಿ ರಾಜಕೀಯಕ್ಕೆ ಎಂಟ್ರಿಕೊಡ್ತಿದ್ದಾರೆ. ದಳಪತಿ ವಿಜಯ್ ನಟನೆಯ ಕೊನೆಯ ಸಿನಿಮಾದ ಟೈಟಲ್ ಏನು ಎಂಬ ಕುತೂಹಲ ಪ್ರತಿಯೊಬ್ಬರಲ್ಲ ಇದೆ. ಇದೀಗ ಸಿನಿಮಾಗೆ ಬೇರೆಯದೇ ಟೈಟಲ್ ನೀಡಲಾಗಿದ್ದು ಈ ಬಗ್ಗೆ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ.
ದಳಪತಿ ವಿಜಯ್ ನಟನೆಯ ಕೊನೆಯ ಚಿತ್ರಕ್ಕೆ ‘ಜನ ನಾಯಗನ್’ ಎನ್ನುವ ಶೀರ್ಷಿಕೆ ಇಡಲಾಗಿದೆ. ಈ ಶೀರ್ಷಿಕೆಗೆ ಅಭಿಮಾನಿಗಳು ದಿಲ್ ಖುಷ್ ಆಗಿದ್ದಾರೆ.
ದಳಪತಿ ವಿಜಯ್ ಅವರು ಈಗ ಮಾಡುತ್ತಿರುವುದು ಅವರ ವೃತ್ತಿ ಜೀವನದ 69ನೇ ಸಿನಿಮಾ. ಇದಾದ ಬಳಿಕ ಅವರು ಸಂಪೂರ್ಣವಾಗಿ ರಾಜಕೀಯದಲ್ಲಿ ತೊಡಗಿಕೊಳ್ಳಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಅವರು ಹೊಸ ಪಾರ್ಟಿ ಕೂಡ ಲಾಂಚ್ ಮಾಡಿದ್ದಾರೆ. ಮುಂದಿನ ವರ್ಷ ತಮಿಳಿನಾಡಿನಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಅವರು ಕೂಡ ಸ್ಪರ್ಧಿಸಲಿದ್ದಾರೆ. ಈ ಕಾರಣಕ್ಕೆ ಅವರ ಕೊನೆಯ ಚಿತ್ರವನ್ನು ರಾಜಕೀಯ ಹಿನ್ನೆಲೆ ಹೊಂದಿರಲಿದೆಯೇ ಎನ್ನುವ ಪ್ರಶ್ನೆ ಶುರುವಾಗಿದೆ.
ದಳಪತಿ ವಿಜಯ್ ಅವರು ವಾಹನ ಏರಿದ್ದಾರೆ. ಅದರ ಮೇಲೆ ನಿಂತು ಸೆಲ್ಫೀ ತೆಗೆದುಕೊಳ್ಳುತ್ತಿದ್ದಾರೆ. ಅವರ ಸುತ್ತಲೂ ಜನ ನಿಂತಿದ್ದಾರೆ. ಈ ಪೋಸ್ಟರ್ ಹಾಗೂ ಟೈಟಲ್ ನೋಡಿದರೆ ಇದೊಂದು ರಾಜಕೀಯ ಕಥಾ ಹಿನ್ನೆಲೆ ಹೊಂದಿರುವ ಚಿತ್ರ ಅನ್ನೋದು ಸ್ಪಷ್ಟವಾಗಿದೆ.
ಎಚ್. ವಿನೋದ್ ಅವರು ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಅನಿರುದ್ಧ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ವೆಂಕಟರ್ ನಾರಾಯಣ್ ಅವರು ‘ಕೆವಿಎನ್ ಪ್ರೊಡಕ್ಷನ್’ ಅಡಿಯಲ್ಲಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆ ಇದೆ.