ಬೆಂಗಳೂರು:- ಕೊಲೆ ಪ್ರಕರಣದಲ್ಲಿ ದರ್ಶನ್ ಅರೆಸ್ಟ್ ಆದ ಬೆನ್ನಲ್ಲೇಇನ್ಸ್ಟಾಗ್ರಾಮ್ ನಲ್ಲಿ ಪತ್ನಿ ವಿಜಯಲಕ್ಷ್ಮಿ ಅವರು ಅನ್ಫಾಲೋ ಮಾಡಿದ್ದಾರೆ.
Breaking News: ವಿವಾಹಿತ ಮಹಿಳೆಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ವ್ಯಕ್ತಿ ಕೊಲೆ…!
ದರ್ಶನ್ ಅವರು ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದಾರೆ. ಸದ್ಯ ಆರು ದಿನಗಳ ಕಾಲ ಅವರನ್ನು ಹಾಗೂ ಅವರ ಸಹಚರರನ್ನು ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಮೌನ ವಹಿಸಿದ್ದಾರೆ. ಈ ಘಟನೆ ಬಳಿಕ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್ ಹಾಕಿಲ್ಲ. ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ಇನ್ಸ್ಟಾಗ್ರಾಮ್ ಪ್ರಾಫೈಲ್ ಫೋಟೋನ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನು ಅನ್ಫಾಲೋ ಮಾಡಿದ್ದಾರೆ. ಈ ನಡೆ ಸಾಕಷ್ಟು ಅನುಮಾನ ಹುಟ್ಟುಹಾಕಿದೆ.