ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಬಳ್ಳಾರಿ ಜೈಲಿನಿಂದ ಮಧ್ಯಂತರ ಜಾಮೀನು ಪಡೆದು ರಿಲೀಸ್ ಆಗಿದ್ದರು. ಬೆನ್ನು ನೋವಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದರ್ಶನ್ ಇದೀಗ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದು ಮನೆಗೆ ಮರಳಿದ್ದಾರೆ.
ಕಳೆದ ಒಂದೂವರೆ ತಿಂಗಳಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿರುವ ದರ್ಶನ್ ಇಂದು ಮನೆಗೆ ತೆರಳಲಿದ್ದಾರೆ. ಸರ್ಜರಿಗಾಗಿ ಆಸ್ಪತ್ರೆ ಸೇರಿದ್ದ ದರ್ಶನ್ ಗೆ ಇದುವರೆಗೂ ಯಾವುದೇ ಸರ್ಜರಿ ನಡೆದಿಲ್ಲ. ಹೈಕೋರ್ಟ್ ನಟ ದರ್ಶನ್ಗೆ ರೆಗ್ಯೂಲರ್ ಬೇಲ್ ಕೊಡ್ತಿದ್ದಂತೆ ದರ್ಶನ್ ಡಿಸ್ಚಾರ್ಜ್ ಆಗಿ ಮನೆಗೆ ಹೋಗಲು ರೆಡಿಯಾಗಿದ್ದಾರೆ.
ನಿಮಗೆ ಅರಿವಿಲ್ಲದೆ PAN Card ದುರ್ಬಳಕೆ ಆಗಿರಬಹುದು ಎಂಬ ಅನುಮಾನವಿದ್ದರೆ ಹೀಗೆ ಮಾಡಿ ಸಾಕು..! ನಿಮ್ಮ ಕಾರ್ಡ್ ಸೇಫ್
ಅದರಂತೆ ಇಂದು BGS ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ ಆಗಲಿದ್ದಾರೆ. ಸರ್ಜರಿ ಇಲ್ಲದೇ ದರ್ಶನ್ ಇಂದೇ ಡಿಸ್ಚಾರ್ಜ್ ಆಗುತ್ತಿದ್ದು, ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಟ್ರೀಟ್ಮೆಂಟ್ ಪಡೆಯಲಿದ್ದಾರೆ ಎನ್ನಲಾಗಿದೆ. ದರ್ಶನ್ ಆಸ್ಪತ್ರೆಯಲ್ಲಿ ಫಿಜಿಯೋಥೆರಫಿ ಚಿಕಿತ್ಸೆಗೆ ಒಳಗಾಗಿದ್ದು ಮನೆಯಲ್ಲಿ ಅದನ್ನೇ ಮುಂದುವರೆಸಲಿದ್ದಾರೆ.
ಬೇಲ್ ಪ್ರಕ್ರಿಯೆ ಮುಗಿಸಲು ನಟ ದರ್ಶನ್ ಡಿ.16ರಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ಗೆ ತರಳಿದ್ದರು. ಕೋರ್ಟ್ನಲ್ಲೂ ನಿಲ್ಲೋಕೂ ನಡೆದಾಡೋಕು ಆಗದೆ ಪರದಾಡ್ತಿದ್ರು. ಆ ಬಳಿಕ ಬೇಲ್ ಪ್ರಕ್ರಿಯೆ ಮುಗಿಸಿ ವಾಪಸ್ ಆಸ್ಪತ್ರೆಗೆ ದರ್ಶನ್ ತೆರಳಿದ್ದ ದರ್ಶನ್ ಇಂದು ಡಿಸ್ಚಾರ್ಜ್ ಆಗಲಿದ್ದಾರೆ.