ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸ್ಯಾಂಡಲ್ವುಡ್ ಸ್ಟಾರ್ ನಟರು ಕೂಡ ಮಕರ ಸಂಕ್ರಾಂತಿ ಹಬ್ಬಕ್ಕೆ ತಮ್ಮ ಅಭಿಮಾನಿಗಳಿಗೆ ತಮ್ಮದೇ ಸ್ಟೈಲ್ನಲ್ಲಿ ಶುಭಾಶಯ ತಿಳಿಸಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಸಂಕ್ರಾಂತಿ ಹಬ್ಬಕ್ಕೆ ಶುಭಕೋರಿದ್ದಾರೆ. ತಮ್ಮ ಫಾರ್ಮ್ ಹೌಸ್ನಲ್ಲಿ ಆಪ್ತ ಬಳಗದೊಂದಿಗೆ ಸಂಕ್ರಾಂತಿ ಆಚರಿಸಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.
‘ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಎಲ್ಲರಲ್ಲೂ ಹೊಸ ಉತ್ಸಾಹ, ನವಚೈತನ್ಯ, ನೆಮ್ಮದಿಯ ಬಾಳನ್ನು ಕರುಣಿಸಲಿ. ಕಹಿ ನೆನಪು ಮರೆಯಾಗಲಿ, ಸಿಹಿ ನೆನಪು ಚಿರವಾಗಲಿ, ಹೊಸ ದಿನಗಳಲ್ಲಿ ನೀವು ಕಂಡ ಕನಸು ನನಸಾಗಲಿ. ನೆಮ್ಮದಿಯ ಬಾಳು ನಿಮ್ಮದಾಗಲಿ’ ಎಂದು ಹಸುವಿನ ಜೊತೆ ಇರುವ ಫೋಟೋ ಹಾಕಿ ಟ್ವೀಟ್ ಮಾಡಿದ್ದಾರೆ.
ಕಾಟೇರ ಚಿತ್ರತಂಡದಿಂದ ಶುಭಾಶಯ
ಕಾಟೇರ ಚಿತ್ರದ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಸಹ ಟ್ವೀಟ್ ಮೂಲಕ ಶುಭಕೋರಿದ್ದಾರೆ. ಎಲ್ಲರಿಗೂ ಮಕರ ಸಂಕ್ರಾಂತಿ ಹಬ್ಬದ ಪ್ರೀತಿಯ ಶುಭಾಶಯಗಳು ಎಂದು ಕಾಟೇರ ಚಿತ್ರದ ಪೋಸ್ಟರ್ ಹಂಚಿಕೊಂಡಿದ್ದಾರೆ. ರಾಕ್ಲೈನ್ ಪ್ರೊಡಕ್ಷನ್ ಸಹ ನಾಡಿನ ಸಮಸ್ತ ಜನತೆಗೆ ‘ಕಾಟೇರ’ ಚಿತ್ರತಂಡದಿಂದ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಪೋಸ್ಟ್ ಮಾಡಿದೆ.