ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಲಾಗಿದೆ. ಈ ಮಧ್ಯೆ ಬೆನ್ನುನೋವಿನ ಕಾರಣದಿಂದ ಮಧ್ಯಂತರ ಜಾಮೀನು ಪಡೆದಿರುವ ದರ್ಸನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್ ಗೆ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಲಾಗಿದೆ. ಅದರಲ್ಲಿ ನಾಲ್ಕು ವಾರ ಈಗಾಗಲೇ ಕಳೆದು ಹೋಗಿದೆ. ಆದರೆ ಇದುವರೆಗೂ ದರ್ಶನ್ ಶಸ್ತ್ರ ಚಿಕಿತ್ಸೆಗೆ ಒಳಗಾಗಿಲ್ಲ. ಇದಕ್ಕೆ ಕಾರಣವನ್ನು ದರ್ಶನ್ ಪರ ವಕೀಲರು ಕೋರ್ಟ್ ಗೆ ನೀಡಿದ್ದಾರೆ.
ಬೆನ್ನು ನೋವಿಗೆ ಚಿಕಿತ್ಸೆ ಪಡೆಯಲು ದರ್ಶನ್ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಯುತ್ತಿದೆ. ಆದರೆ ರೆಗ್ಯುಲರ್ ಬೇಲ್ಗಾಗಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆದಿದೆ. ಎಸ್ಪಿಪಿ ವಾದ ಬಾಕಿ ಇರುವ ಇನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಗಿದೆ.
ಬೆಂಗಳೂರಿನ ಜೈಲಿನಲ್ಲಿದ್ದ ವೇಳೆ ದರ್ಶನ್ ಗೆ ಯಾವುದೇ ಸಮಸ್ಯೆ ಕಾಣಿಸಿಕೊಂಡಿರಲಿಲ್ಲ. ರಾಜಾ ರೋಷವಾಗಿಯೇ ಇದ್ದರು. ಆದರೆ ಬಳ್ಳಾರಿ ಜೈಲಿಗೆ ಶಿಫ್ಟ್ ಆಗ್ತಿದ್ದಂಗೆ ಬೆನ್ನು ನೋವು ಶುರುವಾಗಿದೆ. ಅಲ್ಲದೆ ತುರ್ತಾಗಿ ಶಸ್ತ್ರ ಚಿಕಿತ್ಸೆ ಮಾಡಬೇಕು ಎಂದು ಹೇಳಲಾಗಿತ್ತು. ಆ ಹಿನ್ನೆಲೆಯಲ್ಲಿ ದರ್ಶನ್ ಅವರಿಗೆ ಮಧ್ಯಂತ ಜಾಮೀನು ನೀಡಲಾಗಿತ್ತು. ಆದರೆ ಜಾಮೀನು ಪಡೆದ ತಿಂಗಳು ಕಳೆಯುತ್ತ ಬಂದರೂ ಶಸ್ತ್ರ ಚಿಕಿತ್ಸೆ ಮಾಡಿಲ್ಲ. ಈ ಬಗ್ಗೆ ಹೈಕೋರ್ಟ್ಗೆ ಸಿ.ವಿ. ನಾಗೇಶ್ ಮಾಹಿತಿ ನೀಡಿದ್ದಾರೆ.
‘ಎಂಆರ್ಐ ಸ್ಕ್ಯಾನ್ ಆಗಿದ್ದು ಬಿ.ಪಿ. ವ್ಯತ್ಯಾಸವಾಗುತ್ತಿದೆ. ಅದು ಸರಿ ಹೋಗದೇ ಯಾವುದೇ ಟ್ರೀಟ್ ಮೆಂಟ್ ಕೊಡಲಾಗುವುದಿಲ್ಲ. ಸರ್ಜರಿ ಬಗ್ಗೆ ವೈದ್ಯರು ತೀರ್ಮಾನಿಸುತ್ತಾರೆ’ ಎಂದು ದರ್ಶನ್ ಪರ ವಕೀಲರು ತಿಳಿಸಿದ್ದಾರೆ.
ದರ್ಶನ್ ಮ್ಯಾನೇಜರ್ ನಾಗರಾಜ್ ಪರ ವಕೀಲ ಸಂದೇಶ್ ಚೌಟ ಅವರು ವಾದ ಮಂಡಿಸಿದ್ದಾರೆ. ಆರೋಪಿಗಳಿಗೆ ಗ್ರೌಂಡ್ಸ್ ಆಫ್ ಅರೆಸ್ಟ್ ನೀಡಿಲ್ಲ. ಬಂಧನಕ್ಕೆ ಕಾರಣಗಳನ್ನು ನೀಡದಿರುವುದು ಗಂಭೀರ ಪ್ರಮಾದ. ಈ ಕಾರಣಕ್ಕೆ ಜಾಮೀನು ನೀಡಬೇಕೆಂದು ಸಂದೇಶ್ ಚೌಟ ವಾದ ಮಾಡಿದ್ದಾರೆ. ದರ್ಶನ್ ಸೇರಿ 6 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ.