ಮೈಸೂರು: ಇಂದಿನಿಂದ ಸಿನಿಮಾ ಚಿತ್ರೀಕರಣದಲ್ಲಿ ದರ್ಶನ್ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ದರ್ಶನ್ ನಟನೆಯ ‘ಡೆವಿಲ್’ ಸಿನಿಮಾದ ಚಿತ್ರೀಕರಣ ಇಂದು ಮೈಸೂರಿನ ಅತಿಥಿ ಗೃಹದಲ್ಲಿ ಶುರುವಾಗಿದೆ. ಹಿನ್ನೆಲೆ ಚಿತ್ರೀಕರಣ ಆರಂಭಕ್ಕೂ ಮುನ್ನ ದರ್ಶನ್ ದೇವರ ಮೊರೆ ಹೋಗಿದ್ದಾರೆ.
9 ತಿಂಗಳ ಬಳಿಕ ‘ಡೆವಿಲ್’ ಚಿತ್ರೀಕರಣದಲ್ಲಿ ಭಾಗಿಯಾಗುತ್ತಿರುವ ದರ್ಶನ್ ಶೂಟಿಂಗ್ಗೂ ಮುನ್ನ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ ಚಾಮುಂಡಿ ಬೆಟ್ಟದಿಂದ ನೇರವಾಗಿ ಸರ್ಕಾರಿ ಅತಿಥಿ ಗೃಹಕ್ಕೆ ದರ್ಶನ್ ಆಗಮಿಸಿದ್ದಾರೆ.
Black water: ಬ್ಲ್ಯಾಕ್ ವಾಟರ್ ಎಂದರೇನು..? ಸೆಲೆಬ್ರಿಟಿಗಳು ಯಾಕೆ ಇದನ್ನು ಜಾಸ್ತಿ ಕುಡಿಯುತ್ತಾರೆ ಗೊತ್ತಾ.?
ಮಾರ್ಚ್ 12ರಿಂದ 15ರವರೆಗೆ ಶೂಟಿಂಗ್ಗೆ ಅನುಮತಿ ಸಿಕ್ಕಿದೆ. ಇಂದಿನಿಂದ ಮಾ.14ರ ವರೆಗೆ ಸರ್ಕಾರಿ ಅತಿಥಿ ಗೃಹದಲ್ಲಿ ‘ಡೆವಿಲ್’ ಶೂಟಿಂಗ್ ನಡೆಯಲಿದ್ದು, ಮಾ.15ರಂದು ಲಲಿತಮಹಲ್ ಪ್ಯಾಲೇಸ್ನಲ್ಲಿ ಶೂಟಿಂಗ್ ನಡೆಯಲಿದೆ. ಖಾಸಗಿ ಭದ್ರತಾ ಪಡೆ ಹಾಗೂ ಪೊಲೀಸ್ ಪಡೆ ಎರಡನ್ನೂ ಭದ್ರತೆಗೆ ನಿಯೋಜನೆ ಮಾಡಲಾಗಿದೆ.