ಬೆಂಗಳೂರು: ದಾಸರಹಳ್ಳಿ ವಲಯದ ಚೊಕ್ಕಸಂದ್ರ ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ಅನಧಿಕೃತವಾಗಿ ನಿರ್ಮಿಸಿದ 6 ಅಂತಸ್ತುಗಳ ಕಟ್ಟಡ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.
ಮದುವೆ ಆಗಲು ನಿರಾಕರಿಸಿದ ಶಾಲಾ ಶಿಕ್ಷಕಿಯ ಬರ್ಬರ ಹತ್ಯೆಗೈದ ದುಷ್ಕರ್ಮಿ!
ವಲಯ ಆಯುಕ್ತರಾದ ಹೆಚ್.ಸಿ.ಗಿರೀಶ್ ರವರ ನೇತೃತ್ವದಲ್ಲಿ ಇಂದು ಚೊಕ್ಕಸಂದ್ರ ವಾರ್ಡ್-39ರ ವ್ಯಾಪ್ತಿಯ 3ನೇ ಅಡ್ಡರಸ್ತೆ, 2ನೇ ಮುಖ್ಯ ರಸ್ತೆ ರುಕ್ಮಿಣಿನಗರ, ನಾಗಸಂದ್ರ ಸ್ವತ್ತಿನ ಸಂಖ್ಯೆ: 1 & 2 ರಲ್ಲಿ ಕಟ್ಟಡ ಮಾಲೀಕರಾದ Mr.Joji Jacob S/O Jacob Thomas & Mrs.Sindhu ರವರು 40X70 ಸೈಟ್ ನಲ್ಲಿ ನಕ್ಷೆ ಮಂಜೂರಾತಿ ಪಡೆಯದೆ ಅನಧಿಕೃತವಾಗಿ ನೆಲಮಹಡಿ + 5 ಅಂತಸ್ತು ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆ.
ಕಟ್ಟಡದ ಮಾಲೀಕರಿಗೆ ನೋಟೀಸ್ ಜಾರಿ ಮಾಡಿದ್ದರೂ ಸಹ ಅನಧಿಕೃತ ಕಟ್ಟಡವನ್ನು ತೆರವುಗೊಳಿಸುವ ಬಗ್ಗೆ ಪಾಲಿಕೆಗೆ ಯಾವುದೇ ಮಾಹಿತಿ ಸಲ್ಲಿಸಿರುವುದಿಲ್ಲ. ಆದ್ದರಿಂದ ಇಂದು ಅಧಿಕಾರಿಗಳ ಜೊತೆ ಸ್ಥಳ ಪರಿಶೀಲನೆ ನಡೆಸಿ 6ನೇ ಮಹಡಿಯಲ್ಲಿ ನಿರ್ಮಿಸಿರುವಂತಹ ಎ.ಸಿ.ಸಿ ಶೀಟ್ ಪೆಂಟ್ ಹೌಸ್, ಪ್ಯಾರಪೆಟ್ ವಾಲ್ ಅನ್ನು ಮೂಲಕ ಯಂತ್ರೋಪಕರಣ ಗಳು ಹಾಗು ಸುಮಾರು 20 ಸಿಬ್ಬಂದಿ ಮೂಲಕ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.
ಕಟ್ಟಡದ ಅನಧಿಕೃತ ಭಾಗಗಳನ್ನು ಪೊಲೀಸ್ ಸಿಬ್ಬಂದಿ ಹಾಗೂ ಪೀಣ್ಯ ಕೈಗಾರಿಕಾ ಪ್ರದೇಶ ಉಪ ವಿಭಾಗದ ಅಧಿಕಾರಿ/ಸಿಬ್ಬಂದಿ ಉಪಸ್ಥಿತಿಯಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ತೆರವುಗೊಳಿಸಲು ತಗುಲಿದ ವೆಚ್ಚವನ್ನು ಕಟ್ಟಡ ಮಾಲೀಕರಿಂದ ವಸೂಲಿ ಮಾಡಲಾಗುವುದು.
ಈ ವೇಳೆ ದಾಸರಹಳ್ಳಿ ವಲಯದ ಮುಖ್ಯ ಅಭಿಯಂತರರಾದ ರವಿ, ಕಾರ್ಯಪಾಲಕ ಅಭಿಯಂತರರಾದ ಯಧುಕೃಷ್ಣಾ, ಸಹಾಯಕ ಕಾರ್ಯಪಾಲಕ ಅಭಿಯಂತರರು, ಪೀಣ್ಯ ಕೈಗಾರಿಕಾ ಪ್ರದೇಶ ಉಪ ವಿಭಾಗಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.