ಬೆಂಗಳೂರು: ದಾಸರಹಳ್ಳಿ ಮಾರುತಿ ಬಡಾವಣೆಯ 8, 9, 10ನೇ ಅಡ್ಠರಸ್ತೆಗಳ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ ಎಂದು ಶಾಸ ಕ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು ದಾಸರಹಳ್ಳಿ ಕ್ಷೇತ್ರದ ರಸ್ತೆ ಕಾಮಗಾರಿಗಳು ಅಭಿವೃದ್ಧಿ ಪಥ ದಲ್ಲಿ ಸಾಗುತ್ತಿದೆ. ರಸ್ತೆ ಅಭಿವೃದ್ಧಿಯಲ್ಲಿ ರಾಜ್ಯ ಉತ್ತಮ ಪ್ರಗತಿಯನ್ನು ಹೊಂದಿದ್ದು, ಕೊರೊನಾ ಸಮಯದಲ್ಲಿ ಆರ್ಥಿಕ ಸಂಕಷ್ಟದಿಂದ ರಸ್ತೆ ಕಾಮಗಾರಿ, ನಿರ್ವಹಣೆಯಲ್ಲಿ ಕೊಂಚ ಹಿನ್ನಡೆ ಅನುಭವಿಸಿತ್ತು.
ಇದೀಗ ಅಭಿವೃದ್ಧಿಗೆ ಪ್ರಮುಖ ಕೊಡುಗೆ ನೀಡುತ್ತಿರುವುದು ರಸ್ತೆಗಳು. ರಸ್ತೆ ಅಭಿವೃದ್ಧಿಯಲ್ಲಿ ರಾಜ್ಯ ಉತ್ತಮ ಸಾಧನೆ ಮಾಡುತ್ತಿದೆ. ರಸ್ತೆ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಸಾವಿರಾರು ಕೋಟಿ ರೂ. ಹಣ ವ್ಯಯಿಸುತ್ತದೆ. ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗಾಗಿ ಗಣನೀಯ ಪ್ರಮಾಣದಲ್ಲಿ ಅನುದಾನ ನೀಡುತ್ತಿದೆ. ಅನೇಕ ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತಿದೆ ಎಂದರು. ಇಂತಹ ಯೋಜನೆಗಳಿಂದ ರಸ್ತೆ ಅಭಿವೃದ್ದಿಗಳಾಗಿ ಜನಸಾಮಾನ್ಯರ ಸಂಕಷ್ಟಕ್ಕೆ ಪರಿಹಾರ ಸಿಕ್ಕಿರುವುದು ಸಂತಸ ತಂದಿದೆ ಎಂದರು.

