IPL ಮೆಗಾ ಹರಾಜಿಗೆ ಡೇಟ್ ಫಿಕ್ಸ್ ಆಗಿದ್ದು, ಈ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ.
ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆ ವಿಚಾರ: ಸಿ.ಪಿ ಯೋಗೇಶ್ವರ್ ಹೇಳಿದ್ದೇನು..?
ಕ್ರಿಕೆಟ್ ಅಂದ್ರೆ ಇಂದಿನ ಯುವ ಪೀಳಿಗೆ ಹುಚ್ಚೆದ್ದು ನೋಡುವ ಕ್ರೀಡೆ. ಅದರಲ್ಲೂ IPL ಆರಂಭಕ್ಕೆ ಕೆಲವೇ ತಿಂಗಳು ಬಾಕಿ ಇರುವೀಗಲೇ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳೇ ಆಟಗಾರರ ಖರೀದಿಯ ಪೋಸ್ಟ್ ಮಾಡುತ್ತಿದ್ದಾರೆ.
ಹೀಗಿರುವಾಗಲೇ IPL ಅಭಿಮಾನಿಗಳಿಗೆ ಸಿಕ್ತು ಗುಡ್ ನ್ಯೂಸ್ ಸಿಕ್ಕಿದ್ದು, ಮೆಗಾ ಹರಾಜಿಗೆ ದಿನಾಂಕ ನಿಗದಿ ಆಗಿದೆ. ನವೆಂಬರ್ 24 ಮತ್ತು 25 ರಂದು ಮೆಗಾ ಆಕ್ಷನ್ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇನ್ನು ಈ ಬಾರಿಯ ಮೆಗಾ ಹರಾಜು ಅರಬ್ಬರ ನಾಡಿನಲ್ಲಿ ಆಯೋಜಿಸಲು ಬಿಸಿಸಿಐ ಚಿಂತಿಸಿದೆ.
ಐಪಿಎಲ್ ಮೆಗಾ ಹರಾಜು ಸೌದಿ ಅರೇಬಿಯಾದ ರಾಜಧಾನಿ ರಿಯಾದ್ನಲ್ಲಿ ನಡೆಯಲಿದೆ. ಈ ಹಿಂದೆ ಸಿಂಗಾಪುರ್, ದುಬೈ ಅಥವಾ ಲಂಡನ್ನಲ್ಲಿ ಮೆಗಾ ಆಕ್ಷನ್ ನಡೆಯಲಿದೆ ಎಂದು ವರದಿಯಾಗಿತ್ತು. ಆದರೀಗ ಸೌದಿ ಅರೇಬಿಯಾದಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ.
ಇನ್ನು ಈ ಬಾರಿಯ ಮೆಗಾ ಹರಾಜಿನಲ್ಲಿ 600 ಕ್ಕೂ ಅಧಿಕ ಆಟಗಾರರು ಕಾಣಿಸಿಕೊಳ್ಳಲಿದ್ದಾರೆ. ನವೆಂಬರ್ ಮೊದಲ ವಾರದಲ್ಲಿ ಆಟಗಾರರ ಹೆಸರು ನೋಂದಣಿ ನಡೆಯಲಿದ್ದು, ಇದಾದ ಬಳಿಕ ಆಟಗಾರರ ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಹೀಗೆ ಶಾರ್ಟ್ ಲಿಸ್ಟ್ನಲ್ಲಿ ಸ್ಥಾನ ಪಡೆದ ಆಟಗಾರರ ಹೆಸರು ಮಾತ್ರ ಹರಾಜಿನಲ್ಲಿ ಕಾಣಿಸಿಕೊಳ್ಳಲಿದೆ.
ಹಾಗೆಯೇ ಮೆಗಾ ಹರಾಜಿಗೂ ಮುನ್ನ ಪ್ರತಿ ಫ್ರಾಂಚೈಸಿಗಳಿಗೆ 6 ಆಟಗಾರರನ್ನು ತಂಡದಲ್ಲೇ ಉಳಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಹೀಗೆ ಉಳಿಸಿಕೊಂಡ ಆಟಗಾರರಿಗೆ ಒಟ್ಟು ಹರಾಜು ಮೊತ್ತದಿಂದ 79 ಕೋಟಿ ರೂ. ವ್ಯಯಿಸಬೇಕೆಂಬ ಷರತ್ತನ್ನು ವಿಧಿಸಲಾಗಿದೆ. ಒಂದು ವೇಳೆ 5 ಆಟಗಾರರನ್ನು ರಿಟೈನ್ ಮಾಡಿಕೊಂಡರೆ 75 ಕೋಟಿ ರೂ. ಖರ್ಚು ಮಾಡಬೇಕು ಎಂದು ತಿಳಿಸಲಾಗಿದೆ.
ಇನ್ನು ಈ ಬಾರಿಯ ಮೆಗಾ ಹರಾಜಿಗಾಗಿ ಒಟ್ಟು 120 ಕೋಟಿ ರೂ. ನಿಗದಿ ಮಾಡಲಾಗಿದ್ದು, ಪ್ರತಿ ಫ್ರಾಂಚೈಸಿಗಳು ಉಳಿಸಿಕೊಂಡ ಆಟಗಾರರ ಮೊತ್ತವನ್ನು ಒಟ್ಟು ಹರಾಜು ಮೊತ್ತದಿಂದ ಕಡಿತ ಮಾಡಲಾಗುತ್ತದೆr