ದಾವಣಗೆರೆ :-ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ್ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿವಿಧ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಲ್ಕದೇ, ಚೆಕ್ ಪೋಸ್ಟ್ ಗಳಲ್ಲಿ ವಾಹನಗಳನ್ನು ತಪಾಸಣೆ ನಡೆಸಿ ಯಾವುದೇ ವಾಹನಗಳನ್ನು ತಪಾಸಣೆ ನಡೆದಸೇ ಹಾಗೆ ಬಿಡದಂತೆ ಚೆಕ್ ಪೋಸ್ಟ್ ಸಿಬ್ಬಂದಿಗೆ ಸೂಚನೆ ನೀಡಿದತು. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಜೀನಹಳ್ಳಿ ಚೆಕ್ ಪೋಸ್ಟ್ ಹಾಗೂ ಚನ್ನಗಿರಿ ರಸ್ತೆಯ ಚೆಕ್ ಪೋಸ್ಟ್ ಗಳಿಗೆ ಬೇಟ ನೀಡಿ ಪರಿಶೀಲಿಸಿದರು.
ಯಾವುದೇ ಚುನಾವಣೆ ಅಕ್ರಮಗಳು ನಡೆಯದಂತೆ ಕಟ್ಟುನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ಸೂಚನೆಗಳನ್ನು ನೀಡಿದರು. ಈ ಸಂಧರ್ಭದಲ್ಲಿ ಚನ್ನಗಿರಿ ಡಿವೈಎಸ್ಪಿ ಪ್ರಶಾಂತ್ ಮನ್ನೋಳಿ, ನ್ಯಾಮತಿ ಪೊಲೀಸ್ ಠಾಣೆಯ ಪಿಐ ರವಿ ಹಾಗೂ ಚೆಕ್ ಪೋಸ್ಟ್ ಸಿಬ್ಬಂದಿ ಉಪಸ್ಥಿತರಿದ್ದರು.