ಸಿಡ್ನಿ: ಆಸೀಸ್ ಆಟಗಾರ ಡೇವಿಡ್ ವಾರ್ನರ್ (David Warner) ಅವರು ಏಕದಿನ ಕ್ರಿಕೆಟ್ಗೆ ವಿದಾಯ (ODI retirement) ಘೋಷಿಸಿದ್ದಾರೆ. ಈ ಮೂಲಕ ಹೊಸ ವರ್ಷದ ಆರಂಭದಲ್ಲೇ ಆಸ್ಟ್ರೇಲಿಯಾ ತಂಡಕ್ಕೆ ವಾರ್ನರ್ ಶಾಕ್ ನೀಡಿದ್ದಾರೆ.
ಜನವರಿ 3 ರಂದು ಸಿಡ್ನಿಯಲ್ಲಿ ಪಾಕಿಸ್ತಾನದ (Pakistan) ವಿರುದ್ಧ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯವು ವೃತ್ತಿ ಜೀವನದ ಕೊನೆಯ ಟೆಸ್ಟ್ ಪಂದ್ಯವಾಗಲಿದೆ ಎಂದು ವಾರ್ನರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವ ದೃಷ್ಟಿಯಿಂದ ವಾರ್ನರ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ 565 ರನ್ ಗಳಿಸಿ ಆಸ್ಟ್ರೇಲಿಯಾ ಟ್ರೋಫಿ ಗೆಲ್ಲುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ವಾರ್ನರ್, ಒಟ್ಟಾರೆ 161 ಏಕದಿನ ಪಂದ್ಯಗಳಿಂದ 6932 ರನ್ ಗಳಿಸಿದ್ದಾರೆ. ಏಕದಿನ ಕ್ರಿಕೆಟ್ಗೆ ವಿದಾಯ ಹೇಳಿದ್ದರೂ 2025 ರಲ್ಲಿ ನಡೆಯುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವುದಾಗಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಹೇಳಿದ್ದಾರೆ.
ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವ ಸಲುವಾಗಿ ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಏಕದಿನ ವಿಶ್ವಕಪ್ ಟೂರ್ನಿಯ ಸಮಯದಲ್ಲೇ ನಾನು ಈ ಬಗ್ಗೆ ಕ್ರಿಕೆಟ್ ಮಂಡಳಿಗೆ ತಿಳಿಸಿದ್ದೆ. ಭಾರತದ ವಿರುದ್ಧ ಅದರ ನೆಲದಲ್ಲೇ ವಿಶ್ವಕಪ್ ಗೆದ್ದಿರುವುದು ದೊಡ್ಡ ಸಾಧನೆಯಾಗಿದೆ,” ಎಂದು ಆರಂಭಿಕ ಆಟಗಾರ ಹೇಳಿದ್ದಾರೆ.