ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಮನವಿ ಸ್ವೀಕರಿಸುವಾಗ ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಅವರು ” ಪಾಪದ ಕೊಡ ತುಂಬಿದಾಗ ಎಲ್ಲವೂ ಹೊರ ಬರಬೇಕು ” ಎಂದು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಯಿತು. ಹಾಸನ ನಗರದ ಹೇಮಾವತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯ್ತು.
Raw banana: ಸಿಹಿಯಾದ ಬಾಳೆಹಣ್ಣು ಮಾತ್ರವಲ್ಲ ಬಾಳೆಕಾಯಿ ಕೂಡ ಆರೋಗ್ಯಕ್ಕೆ ಉತ್ತಮ!
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರಗತಿಪರ ಸಂಘಟನೆಗಳು, ಸಾಹಿತಿ, ಚಿಂತಕರು ಪ್ರತಿಭಟನೆ ನಡೆಸಿ, ಪ್ರಜ್ವಲ್ ರೇವಣ್ಣ ವಿರುದ್ಧ ಘೋಷಣೆ ಕೂಗಿ, ಆಕ್ರೋಶ ಹೊರಹಾಕಿದರು. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅವರಿಗೆ ಮನವಿ ಮಾಡಿದರು. ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮವಹಿಸದಿದ್ದರೆ ರಾಜ್ಯಾದ್ಯಂತ ಹೋರಾಟ ಪ್ರಾರಂಭಿಸುವುದಾಗಿ ಎಚ್ಚರಿಕೆ ನೀಡಿದರು.