ಬೀದರ್ : ಬೀದರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಾಲೂಕಿನ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ, ಮಕ್ಕಳಿಗೆ ಮತ್ತು ಗರ್ಭೀಣಿಯರಿಗೆ ವಿತರಣೆ ಮಾಡುವ ಆಹಾರ ಪದಾರ್ಥಗಳನ್ನು ಪರಿಶೀಲನೆ ನಡೆಸಿದರು. ಮಕ್ಕಳ ಜೋತೆಗೆ ಬೆರೆತು ಮಕ್ಕಳ ಓದುವಿಕೆ ಪರಿಶೀಲಿಸಿದರು. ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಗುಣಮಟ್ಟದ ಆಹಾರ ಪದಾರ್ಥಗಳು ವಿತರಣೆ ಮಾಡಬೇಕು. ಕಳಪೆ ಗುಣಮಟ್ಟದ ಆಹಾರ ವಿತರಣೆ ಆರೋಪ ಕೇಳಿ ಬಂದರೆ ಸಂಬಂಧಪಟ್ಟವರ ಮೇಲೆ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ಕೊಟ್ಟರು.
ಬೀದರ್ ತಾಲೂಕಿನಲ್ಲಿ 11,476 ಗರ್ಭಿಣಿಯರು ನೋಂದಣಿ ಮಾಡಿಕೊಂಡಿದ್ದಾರೆ. ಅವರೆಲ್ಲರಿಗೂ ತಾಯಿ ಕಾರ್ಡ್ ವಿತರಣೆ ಮಾಡಬೇಕು. ಚಿಕಿತ್ಸೆಯ ವಿವರಗಳನ್ನು ಕಡ್ಡಾಯವಾಗಿ ನಮೂದಿಸಬೇಕು ಎಂದು ಟಿಎಚ್ಒ ಸಂಗಾರೆಡ್ಡಿ ಅವರಿಗೆ ಸೂಚನೆ ನೀಡಿದರು. ಜನನಿ ಸುರಕ್ಷಾ ಯೋಜನೆ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಹಾಗೂ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಿಂದ ಫಲಾನುಭವಿಗಳು ಹೊರಗುಳಿಯದಂತೆ ನೋಡಿಕೊಳ್ಳಬೇಕು.ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.