ಹಾವೇರಿ:– DCM ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗೋದು ಫಿಕ್ಸ್ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೇಲಿರುವ ಸಿಬಿಐ ಕೇಸ್ ವಾಪಸ್ ಪಡೆಯಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ. ಅವರು ಜೈಲಿಗೆ ಹೋಗುವುದು ನಿಶ್ಚಿತ. ಆದರೆ ಲೋಕಸಭೆ ಚುನಾವಣೆಗೆ ಮೊದಲೋ ಅಥವಾ ನಂತರವೋ ಎಂಬುದು ತೀರ್ಮಾನ ಆಗಬೇಕಷ್ಟೆ ಎಂದರು.
ಡಿ.ಕೆ.ಶಿವಕುಮಾರ್ ಅವರ ಕೇಸ್ ಮುಂದುವರೆಸಲು ಅಭ್ಯಂತರ ಇಲ್ಲ ಎಂದು ಕೋರ್ಟ್ ಹೇಳಿದೆ.
ಅವರ ಮೇಲಿನ ತನಿಖೆ ಶೇ.90 ಮುಗಿದಿದ್ದು. ಚಾರ್ಜ್ ಶೀಟ್ ಸಲ್ಲಿಕೆ ಮಾತ್ರ ಬಾಕಿ ಇದೆ. ಮೇಲ್ನೋಟಕ್ಕೆ ಸ್ಪಷ್ಟವಾಗಿ ಅಕ್ರಮ ಹಣ ಸಂಪಾದನೆ ಬಹಿರಂಗ ಆಗಿದೆ. ಹೀಗಾಗಿ ಅವರು ಜೈಲಿಗೆ ಹೋಗುವುದರಲ್ಲಿ ಯಾವುದೇ ಸಂಶಯ ಇಲ್ಲ ಎಂದರು. ಸರ್ಕಾರವೇ ಬಿದ್ದು ಹೋಗುತ್ತೆ: ಜಾತಿಗಣತಿ ಬಿಡುಗಡೆ ಮಾಡಿದ ದಿನವೇ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗಲಿದೆ. ಜಾತಿ ಜನಗಣತಿ ವಿಚಾರದಲ್ಲಿ ಸಮಸ್ಯೆ ಸೃಷ್ಟಿ ಮಾಡಿದವರೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದು ಕಿಡಿಕಾರಿದರು.