ರಾಮನಗರ: ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಿಕೆ ಸುರೇಶ್ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕುಟುಂಬ ಸಮೇತ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡಆಲಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಮತಗಟ್ಟೆಗೆ ತೆರಳಿ ಮತದಾನ ಮಾಡಿದರು. ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ.
Supreme Court: ಚುನಾವಣಾ ಆಯೋಗಕ್ಕೆ ಬಿಗ್ ರಿಲೀಫ್: ಇವಿಎಂ-ವಿವಿಪ್ಯಾಟ್ ಸಂಪೂರ್ಣ ಎಣಿಕೆ ಅರ್ಜಿಗಳ ವಜಾ
ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಸೆಂಟ್ರಲ್, ಬೆಂಗಳೂರು ಗ್ರಾಮಾಂತರ, ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ತುಮಕೂರು, ಕೋಲಾರ, ಹಾಸನ, ಉಡುಪಿ-ಚಿಕ್ಕಮಗಳೂರು ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)