ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು/ಕುಂದು-ಕೊರತೆಗಳನ್ನು ಆಲಿಸುವ ಸಲುವಾಗಿ ಇಂದು ಡಿಸಿಎಂ ಡಿ.ಕೆ,ಶಿವಕುಮಾರ್ ಅವರು ಯಲಹಂಕ, ಬ್ಯಾಟರಾಯನಪುರ ಹಾಗೂ ದಾಸರಹಳ್ಳಿ ವಿಧಾನಸಭಾ ಕ್ಷೇತ್ರಗಳನ್ನು ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು.
ಯಲಹಂಕದಲ್ಲಿ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಡಿಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವರ ನೇತೃತ್ವದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಅಲ್ಲೆ ಪರಿಹಾರ ಕಾರ್ಯ ನೀಡಿ ಕೂಡ ಒದಗಿಸಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು/ಕುಂದು-ಕೊರತೆಗಳನ್ನು ಆಲಿಸುವ ಸಲುವಾಗಿ ಸನ್ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಶ್ರೀ ಡಿ.ಕೆ ಶಿವಕುಮಾರ್ ಅವರು ಯಲಹಂಕ, ಬ್ಯಾಟರಾಯನಪುರ ಹಾಗೂ ದಾಸರಹಳ್ಳಿ ವಿಧಾನಸಭಾ ಕ್ಷೇತ್ರಗಳನ್ನು ಒಟ್ಟುಗೂಡಿಸಿ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಈ ವೇಳೆ ಕಂದಾಯ ಸಚಿವರು ಹಾಗೂ ಬ್ಯಾಟರಾಯನಪುರ ಶಾಸಕರಾದ ಕೃಷ್ಣ ಬೈರೇಗೌಡ, ಯಲಹಂಕ ಶಾಸಕರಾದ ವಿಶ್ವನಾಥ್, ದಾಸರಹಳ್ಳಿ ಶಾಸಕರಾದ ಶ್ರೀ ಮುನಿರಾಜು, ವಿಧಾನ ಪರಿಷತ್ ಸದಸ್ಯರಾದ ಎಂ.ಆರ್ ಸೀತಾರಾಮ್, ಮಾಜಿ ರಾಜ್ಯಸಭಾ ಸದಸ್ಯರಾದ ರಾಜೀವ್ ಗೌಡ, ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.