ಟೀಂ ಇಂಡಿಯಾ ವೇಗಿ ಸಿರಾಜ್ ಅವರು ಡಿಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಅವರು ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ. ಎ ರೇವಂತ್ ರೆಡ್ಡಿ ಅವರು ಆಗಸ್ಟ್ನಲ್ಲಿ ಕ್ರಿಕೆಟರ್ ಮೊಹಮ್ಮದ್ ಸಿರಾಜ್ ಮತ್ತು ಬಾಕ್ಸರ್ ನಿಖಾತ್ ಝರೀನ್ ಅವರು ಕ್ರೀಡೆಯಲ್ಲಿ ಮಾಡಿದ ಅತ್ಯುತ್ತಮ ಸಾಧನೆಯನ್ನು ಪರಿಗಣಿಸಿ ಗ್ರೂಪ್ 1 ದರ್ಜೆಯ ಹುದ್ದೆ ನೀಡುವುದಾಗಿ ಘೋಷಿಸಿದ್ದರು.
Mysuru Dasara: ಅದ್ದೂರಿ ಜಂಬೂಸವಾರಿಗೆ ಕ್ಷಣಗಣನೆ: ಏನೆಲ್ಲಾ ವಿಶೇಷತೆ ಇರುತ್ತೆ?
ಈ ಘೋಷಣೆಯಂತೆ ಇಂದು ಸಿರಾಜ್ ಡಿಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದರು. ಈ ವೇಳೆ ಮೊಹಮ್ಮದ್ ಸಿರಾಜ್ಗೆ ಸಂಸದ ಎಂ ಅನಿಲ್ ಕುಮಾರ್ ಯಾದವ್ ಮತ್ತು ಮತ್ತೋರ್ವ ಸಂಸದ ಮೊಹಮ್ಮದ್ ಫಾಹೀಮುದ್ದೀನ್ ಖುರೇಶಿ ಹಾಜರಿದ್ದರು.
ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಘೋಷಣೆಯ ನಂತರ ತೆಲಂಗಾಣ ಸರ್ಕಾರವು ಸಾರ್ವಜನಿಕ ಸೇವೆಗಳಿಗೆ ನೇಮಕಾತಿಗಳ ನಿಯಂತ್ರಣ ಮತ್ತು ಸಿಬ್ಬಂದಿ -1994 ಕಾಯ್ದೆಯನ್ನು ತಿದ್ದುಪಡಿ ಮಾಡಿತ್ತು. ಸಿರಾಜ್ ಅವರು ಟಿ20 ವಿಶ್ವಕಪ್ ತಂಡದ ಸದಸ್ಯರಾಗಿದ್ದ ಹಿನ್ನೆಲೆಯಲ್ಲಿ ತೆಲಂಗಾಣ ಸರ್ಕಾರ ಈ ಗೌರವ ನೀಡಿದೆ.
ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರನ್ನು ತೆಲಂಗಾಣದ ಡಿಎಸ್ಪಿಯಾಗಿ ನೇಮಿಸಲಾಗಿದೆ. ಅವರ ಕ್ರಿಕೆಟ್ ಸಾಧನೆಗೆ ರಾಜ್ಯದಿಂದ ಈ ಗೌರವ ಸಲ್ಲಿಸಲಾಗಿದೆ.