ಬೆಂಗಳೂರು : ಬೆಂಗಳೂರು ನಗರದ ಕೆ ಆರ್ ಮಾರ್ಕೆಟ್ ನಲ್ಲಿ ನಡೆದಿದ್ದ ಚಿನ್ನಾಭರಣ ಕಳವು ಪ್ರಕರಣ ಸಂಬಂಧ ಡಿಸಿಪಿ ಸಂಜೀವ್ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ ಆರ್ ಮಾರ್ಕೆಟ್ ನಲ್ಲಿ ನಡೆದಿದ್ದ ಚಿನ್ನಾಭರಣ ಕಳ್ಳತನ ಸಂಬಂಧ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾಗುತ್ತಿದ್ದಂತೆ ಮಾರ್ಕೆಟ್ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ ಈ ಆರೋಪಿ ಚಿನ್ನ ಕದ್ದು ಅದನ್ನು ಗಟ್ಟಿಯನ್ನಾಗಿಸಿ ಮಾರಾಟ ಮಾಡುತ್ತಿದ್ದ ಎಂದು ಹೇಳಲಾಗಿದೆ. ಇನ್ನೂ ಆರೋಪಿಯು ಬೇರೆ ಪ್ರಕರಣಗಳಲ್ಲೂ ಭಾಗಿ ಆಗಿರೋ ಶಂಕೆ ವ್ಯಕ್ತವಾಗಿದ್ದು, ಸದ್ಯ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ಮಾಹಿತಿ ನೀಡಿದ್ದಾರೆ.
