ಕಲಬುರಗಿ:- ಕಳೆದ ಕೆಲ ದಿನಗಳಿಂದ ಮೌತ್ ಕ್ಯಾನ್ಸರ್ನಿಂದ ಬಳಲುತ್ತಿದ್ದ ಇನ್ಸ್ಪೆಕ್ಟರ್ರೊಬ್ಬರ ಶವ ರೈಲು ಹಳಿ ಮೇಲೆ ಪತ್ತೆಯಾಗಿದೆ.
ಕಾಯಿಲೆಯಿಂದಲೇ ಮಾನಸಿಕವಾಗಿ ನೊಂದು ಡಿಪ್ರೆಷನ್ ಗೊಳಗಾಗಿದ್ದರು. ಇದೇ ಕಾರಣಕ್ಕೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅದಾಗ್ಯೂ ಸಾವಿಗೆ ನಿಖರ ಕಾರಣ ಇನ್ನೂ ಗೊತ್ತಾಗಿಲ್ಲ. ರೈಲ್ಬೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಶವವನ್ನ ಕಲಬುರಗಿ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ