ಮುಂಬೈ: ಮುಂದಿನ ನವೆಂಬರ್-ಡಿಸೆಂಬರ್ನಲ್ಲಿ 2025ರ ಐಪಿಎಲ್ ಟೂರ್ನಿಗೆ ಮೆಗಾ ಹರಾಜು ನಡೆಯುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಎಲ್ಲಾ ಫ್ರಾಂಚೈಸಿಗಳು ರಿಟೇನ್ ಆಟಗಾರರ ಪಟ್ಟಿ ಪ್ರಕಟಿಸಲು ಡೆಡ್ಲೈನ್ ಫಿಕ್ಸ್ ಮಾಡಿದೆ. ಮೆಗಾ ಹರಾಜಿಗೂ ಮುನ್ನ ತಂಡದಲ್ಲಿ ಉಳಿಸಿಕೊಳ್ಳಬಹುದಾದದ ಆಟಗಾರರ ಪಟ್ಟಿಯನ್ನು ಅಕ್ಟೋಬರ್ 31ರ ಒಳಗೆ ಪ್ರಕಟಿಸುವಂತೆ ಗಡುವು ನೀಡಿದೆ.
ನಿಮಗೆ ಗೊತ್ತೆ..? ಇದೇ ಕಾರಣಕ್ಕೆ ಮಹಿಳೆಯರಲ್ಲಿ “ಸೆಕ್ಸ್” ವೇಳೆ ನೋವು ಕಾಣಿಸಿಕೊಳ್ಳುವುದು!
ಎಲ್ಲಾ ಫ್ರಾಂಚೈಸಿಗಳಿಗೂ ಈ ಬಾರಿ ರೈಟ್ ಟು ಮ್ಯಾಚ್ ಕಾರ್ಡ್ನೊಂದಿಗೆ 6 ಆಟಗಾರರನ್ನು ಉಳಿಸಿಕೊಳ್ಳಲು ಮಾತ್ರ ಬಿಸಿಸಿಐ ಅನುಮತಿಸಿದೆ. ಅಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿ 5 ವರ್ಷಗಳಾಗಿರುವ ಆಟಗಾರರನ್ನು ಅನ್ಕ್ಯಾಪ್ಟ್ ಪ್ಲೇಯರ್ ಎಂದು, ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ಚೊಚ್ಚಲ ಆವೃತ್ತಿ ಪ್ರವೇಶಿಸುವ ಆಟಗಾರರನ್ನು ಕ್ಯಾಪ್ಡ್ ಪ್ಲೇಯರ್ ಎಂದೂ ಪರಿಗಣಿಸಲಾಗುವುದು ಎಂದು ಬಿಸಿಸಿಐ ಹೇಳಿದೆ.
ಏನಿದು ಆರ್ಟಿಎಂ ಕಾರ್ಡ್ ರೂಲ್ಸ್?
ಆರ್ಟಿಎಂ ಕಾರ್ಡ್ (ರೈಟ್ ಟು ಮ್ಯಾಚ್ ಕಾರ್ಡ್ – RTM Card) ಅನ್ವಯ ಫ್ರಾಂಚೈಸಿಯೊಂದು ತನ್ನ ತಂಡದ ಆಟಗಾರನೊಬ್ಬ ಬೇರೆ ತಂಡಕ್ಕೆ ಹೆಚ್ಚಿನ ಮೊತ್ತಕ್ಕೆ ಮಾರಾಟವಾದಾಗ ಅದೇ ಮೊತ್ತಕ್ಕೆ ಆತನನ್ನು ತನ್ನ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ, ಇದನ್ನು ಆರ್ಟಿಎಂ ಎನ್ನಲಾಗುತ್ತದೆ. ಈ ಬಾರಿ ಒಂದೇ ಕಾರ್ಡ್ ಬಳಕೆಗೆ ಅವಕಾಶ ನೀಡುವುದಾಗಿ ಹೇಳಲಾಗಿದೆ. ಹೆಚ್ಚಿನ ಆರ್ಟಿಎಂ ಬಳಸಲು ಅವಕಾಶ ನೀಡಿದರೇ ಹರಾಜು ಪ್ರಕ್ರಿಯೆ ಮಹತ್ವ ಕಳೆದುಕೊಳ್ಳುತ್ತದೆ ಎಂದು ಬಿಸಿಸಿಐ ಅಭಿಪ್ರಾಯ ಪಟ್ಟಿದೆ.
ಶ್ರೀಮಂತ ಕ್ರಿಕೆಟ್ ಲೀಗ್ನಲ್ಲಿ ಐತಿಹಾಸಿಕ ನಿರ್ಣಯ
ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ (IPL 2025) ಎಂದೇ ಗುರುತಿಸಿಕೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಮಹತ್ವದ ಬದಲಾವಣೆಯೊಂದು ಆಗಿದೆ. 2025ರ ಐಪಿಎಲ್ ಮೆಗಾ ಹರಾಜಿಗೂ ಮುನ್ನವೇ ಬಿಸಿಸಿಐ ಆಟಗಾರರಿಗೆ ಭರ್ಜರಿ ಗಿಫ್ಟ್ ನೀಡಿದೆ. ಟೂರ್ನಿ ವೇಳೆ ಲೀಗ್ ಪಂದ್ಯಅಗಳನ್ನಾಡುವ ಪ್ರತಿಯೊಬ್ಬ ಆಟಗಾರನೂ ಹರಾಜಿನಲ್ಲಿ ನಿಗದಿಯಾದ ಮೊತ್ತಕ್ಕಿಂತ ಹೆಚ್ಚುವರಿ ನಗದು ಹಣವನ್ನು ಪಡೆಯಲಿದ್ದಾರೆ ಎಂದು ಬಿಸಿಸಿಐ (BCCI) ಘೋಷಣೆ ಮಾಡಿದೆ.
ಈ ಕುರಿತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay Shah) ತಮ್ಮ ಎಕ್ಸ್ ಖಾತೆಯಲ್ಲಿ ಅಧಿಕೃತ ಮಾಹಿತಿ ಹಂಚಿಕೊಂಡಿದ್ದಾರೆ. ಈವರೆಗಿನ ಲೀಗ್ನಲ್ಲಿ ಆಟಗಾರರು ಹರಾಜಿನಲ್ಲಿ ಪಡೆದ ಮೊತ್ತ ಪಡೆಯುತ್ತಿದ್ದರು. ಇದರೊಂದಿಗೆ ಸೂಪರ್ ಸಿಕ್ಸ್, ಬೌಂಡರಿ, ಕ್ಯಾಚ್, ಎಲೆಕ್ಟ್ರಿಕ್ ಸ್ಟ್ರೈಕರ್, ಪ್ಲೇಯರ್ ಆಫ್ದಿ ಮ್ಯಾಚ್, ಪ್ಲೇಯರ್ ಆಫ್ ದಿ ಸೀರಿಸ್ ಮೂಲಕ ಹೆಚ್ಚುವರಿ ನಗದು ಬಹುಮಾನ ಪಡೆಯುತ್ತಿದ್ದರು. ಇನ್ಮುಂದೆ ಇದರ ಹೊರತಾಗಿ ಪ್ರತಿ ಲೀಗ್ ಪಂದ್ಯದಲ್ಲೂ ಆಟಗಾರರು ಹೆಚ್ಚುವರಿಯಾಗಿ ಲಕ್ಷ ಲಕ್ಷ ಹಣ ಗಳಿಸಲಿದ್ದಾರೆ.