ಬೆಳಗಾವಿ: ಬೌ.. ಬೌ.. ಕಾಟಕ್ಕೆ ಗಡಿ ಜಿಲ್ಲೆ ಬೆಳಗಾವಿ ಜನತೆ ಬೆಚ್ಚಿಬಿದ್ದಿದ್ದಾರೆ. ಬೆಚ್ಚಿ ಬೀಳಿಸುವಂತಿದೆ ಬೆಳಗಾವಿ ಜಿಲ್ಲೆಯ ನಾಯಿ ಕಡಿತಕ್ಕೆ ಒಳಗಾದವರ ಸಂಖ್ಯೆ. ಹೌದು ಬೀದಿ ನಾಯಿಗಳ ಕಾಟಕ್ಕೆ ಜಿಲ್ಲೆಯ ಜನ ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ. ಜಿಲ್ಲೆಯಲ್ಲಿ ನಾಯಿ ಕಡಿತಕ್ಕೆ ಒಳಗಾದವರ ಸಂಖ್ಯೆ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿ ನೀಡಿದೆ.
Railway Jobs: ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶ..! ತಿಂಗಳಿಗೆ 56,000 ಸಂಬಳ
ಕಳೆದ 16 ತಿಂಗಳಲ್ಲಿ ಒಟ್ಟು 44,417 ಜನರ ಮೇಲೆ ಬೀದಿ ನಾಯಿಗಳು ಡೆಡ್ಲಿ ಅಟ್ಯಾಕ್ ಮಾಡಿವೆ. 2023 ಜನವರಿಯಿಂದ ಡಿಸೆಂಬರ್ವರೆಗೆ 34,479 ನಾಯಿ ಕಡಿತ ಪ್ರಕರಣಗಳು ಬೆಳಕಿಗೆ ಬಂದಿವೆ. ಇನ್ನು 2024 ಜನವರಿಯಿಂದ ಏಪ್ರಿಲ್ವರೆಗೆ 9938 ಜನರಿಗೆ ನಾಯಿಗಳು ಕಚ್ಚಿ ಗಾಯಗೊಳಿಸಿವೆ. ಈ ಆಘಾತಕಾರಿ ಮಾಹಿತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)