ಗದಗ: ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ನಡುರಸ್ತೆಯಲ್ಲೇ ಪತಿಯೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಭೀಕರ ಘಟನೆ ನಡೆದಿದೆ. ಹಲ್ಲೆಗೊಳಗಾದ ಪತ್ನಿ ಗೀತಾ, ಮುಂಡರಗಿ ಅಂಚೆ ಕಚೇರಿಯಲ್ಲಿ ಅಂಚೆ ಸಹಾಯಕಿಯಾಗಿ ಸೇವೆಸಲ್ಲಿಸುತ್ತಿದ್ದರು. ಹಲವು ತಿಂಗಳಿಂದ ಗಂಡ ಬೇಲೂರಪ್ಪ ಮತ್ತು ಹೆಂಡತಿ ನಡುವೆ ಜಗಳವಿತ್ತು. ಈ ಹಿನ್ನಲೆ ಇಂದು ಸಿಟ್ಟಿಗೆದ್ದ ಗಂಡ,
ನಡುರಸ್ತೆಯಲ್ಲೇ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಬಳಿಕ ಮಚ್ಚು ಹಿಡಿದುಕೊಂಡು ಗಂಡ ಅಲ್ಲೇ ನಿಂತಿದ್ದಾನೆ. ಈ ಹಿನ್ನಲೆ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ ಗೀತಾಳನ್ನು ಆಸ್ಪತ್ರೆಗೆ ಸಾಗಿಸಲು ಹಿಂದೇಟು ಹಾಕಿದ್ದಾರೆ. ಅಂಚೆ ಸಹಾಯಕಿ ಗೀತಾ ಸ್ಥಿತಿ ಚಿಂತಾಜನಿಕವಾಗಿದ್ದು, ಸ್ಥಳಕ್ಕೆ ಮುಂಡರಗಿ ಪೊಲೀಸರು ದೌಡಾಯಿಸಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)