ಬೆಂಗಳೂರು:- ಇತ್ತೀಚೆಗೆ ಕರ್ನಾಟಕದಲ್ಲಿ ನಡೆದಿದ್ದ ಬಾಣಂತಿಯರ ಸಾವು ಪ್ರಕರಣ ಇಡೀ ರಾಜ್ಯದ ಜನರನ್ನೇ ಬೆಚ್ಚಿ ಬೀಳಿಸಿದೆ. ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಬಾರೀ ಸದ್ದು ಮಾಡುತ್ತಿದ್ದು, ಸರ್ಕಾರ ಕೂಡ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ.
ಇನ್ನೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಐವಿ ಇದೀಗ ಗ್ಲುಕೋಸ್ನಲ್ಲಿ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ರಾಜ್ಯದ ಐವಿ ಫ್ಲೂಯಿಡ್ ರಿಪೋರ್ಟ್ನಲ್ಲಿ ಅಸುರಕ್ಷಿತ ಎಂದು ಉಲ್ಲೇಖಿಸಲಾಗಿದ್ದು, ಅದರಲ್ಲಿ ಫಂಗಸ್ ಸೇರಿದ್ದಂತೆ ಬ್ಯಾಕ್ಟೀರಿಯಾ ಅಂಶ ಕಂಡುಬಂದಿದೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಅವರು ಈ ಬಗ್ಗೆ ಸಂಪೂರ್ಣ ವಿವರಣೆ ಕೇಳಿ ಕೇಂದ್ರದ ಡ್ರಗ್ ಕಂಟ್ರೋಲ್ ಇಲಾಖೆಗೆ ಆರೋಗ್ಯ ಇಲಾಖೆಗೆ ಪತ್ರ ಬರೆದಿದ್ದಾರೆ.
ವಿಮ್ಸ್ ಆಸ್ಪತ್ರೆಯಲ್ಲಿ ಒಬ್ಬರು, ಬಳ್ಳಾರಿಯ ಬಿಮ್ಸ್ನಲ್ಲಿ ನಾಲ್ವರು ಬಾಣಂತಿಯರ ಸಾವು ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಐವರು ಬಾಣಂತಿಯರ ಸಾವಿಗೆ ಕೇಂದ್ರವೇ ಕಾರಣ ಅಂತ ಬೆರಳು ತೋರಿಸ್ತಿದ್ದಾರೆ. ಕೇಂದ್ರದ ವರದಿಯ ಕಳ್ಳಾಟದಿಂದಲೇ ಮಾರಣ ಹೋಮ ನಡೀತಾ ಎನ್ನುವ ಅನುಮಾನ ಸೃಷ್ಟಿಯಾಗಿದೆ. ಇದರ ಮಧ್ಯ ಇದೀಗ 92 ಐವಿ ಫ್ಲೂಯಿಡ್ ಸ್ಯಾಂಪಲ್ಸ್ ರಿಪೋರ್ಟ್ ಬಂದಿದ್ದು, ವರದಿಯಲ್ಲಿ ಶಾಕಿಂಗ್ ಅಂಶ ಕಂಡುಬಂದಿದೆ.