ಬೆಂಗಳೂರು: ಹುಟ್ಟು ಹಬ್ಬದ ಸಲುವಾಗಿ ಕಟೌಟ್ ನಿಲ್ಲಿಸುವುದಕ್ಕೆ ಹೋಗಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯಶ್ ಅಭಿಮಾನಿಗಳ (Yash Fans) ಕುಟುಂಬಕ್ಕೆ ರಾಜ್ಯ ಸರ್ಕಾರ (Government Of Karnataka) ಪರಿಹಾರ ಘೋಷಣೆ ಮಾಡಿದೆ.
ಈ ಸಂಬಂಧ ಮಾತನಾಡಿರುವ ಸಚಿವ ಹೆಚ್.ಕೆ ಪಾಟೀಲ್ (HK Patil), ವಿದ್ಯುತ್ ಸ್ಪರ್ಶದಿಂದ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದೇವೆ. ಗಾಯಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
Ramesh Jarakiholi: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಂಚನೆ ಆರೋಪ!
ಮುಂದುವರಿದು, ಯಶ್ ಅಭಿಮಾನಿಗಳು ಮೃತಪಟ್ಟಿರುವ ಘಟನೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ನಟ ಯಶ್ ಸಹ ನನ್ನ ಜೊತೆ ಮಾತನಾಡಿದ್ದಾರೆ. ಅಭಿಮಾನಿಗಳ ಮನೆಗೆ ಅವರಿಂದು ಭೇಟಿ ನೀಡಲಿದ್ದಾರೆ. ಎತ್ತರದಲ್ಲಿ ಫ್ಲೆಕ್ಸ್ ಹಾಕುವಾಗ ಭದ್ರತಾ ವೈಫಲ್ಯವಾಗುತ್ತಿದೆ. ಈ ರೀತಿ ಘಟನೆಗಳು ನಡೆಯದಂತೆ ಏನೆಲ್ಲಾ ಎಚ್ಚರಿಕೆ ವಹಿಸಬಹುದು ಎಂದು ಸಿಎಂ ಜೊತೆಗೆ ಚರ್ಚೆ ಮಾಡ್ತೀವಿ. ನಂತರ ಕ್ರಮವನ್ನು ಅನುಷ್ಠಾನಗೊಳಿಸುತ್ತೇವೆ ಎಂದು ವಿವರಿಸಿದ್ದಾರೆ.