ನವದೆಹಲಿ:- ಇತ್ತೀಚೆಗೆ ಯೋಗಿ ಆದಿತ್ಯನಾಥ್ ಅವರನ್ನು ಕೊಲ್ಲುವುದಾಗಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.
ಅದರಂತೆ UP ಸಿಎಂ ಯೋಗಿ ಆದಿತ್ಯನಾಥ್ಗೆ ಕೊಲೆ ಬೆದರಿಕೆ ಹಾಕಿದ್ದ ಬಾಂಗ್ಲಾ ವ್ಯಕ್ತಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಶೇಖ್ ಅತಾಲ್ ಬಂಧಿತ ಆರೋಪಿ. ಈತ ಬಾಂಗ್ಲಾ ದೇಶದವ ಎನ್ನಲಾಗಿದೆ. ಕೊಲೆ ಬೆದರಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದಾದ ನಂತರ, ಸೆಕ್ಟರ್ 39 ನೋಯ್ಡಾ ಪೊಲೀಸರು ಕ್ರಮ ಕೈಗೊಂಡು ಆ ವ್ಯಕ್ತಿಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.
ಆತನಿಂದ ಆಯುಧವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ಆರೋಪಿಯು ಯೋಗಿ ಆದಿತ್ಯನಾಥ್ನನ್ನು ಕೊಂಲೆ ಮಾಡುವ ಬಗ್ಗೆ ಮಾತನಾಡುತ್ತಿರುವುದು ಮತ್ತು ಉದ್ರೇಕಕಾರಿ ಹೇಳಿಕೆಗಳನ್ನು ನೀಡಿರುವುದು ಕಂಡುಬಂದಿದೆ.