ಬೆಂಗಳೂರು: ಸಾಲಗಾರರ ಕಿರುಕುಳದಿಂದ ಬೇಸತ್ತ ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಅಕ್ಷಯ ನಗರದಲ್ಲಿ ನಡೆದಿದೆ. ಕಲಾಲ್ ದತ್ತ (40) ಆತ್ಮಹತ್ಯೆ ಮಾಡಿಕೊಂಡಿರುವ ಉದ್ಯಮಿಯಾಗಿದ್ದು, ಬಡ್ಡಿ ಟಾರ್ಚರ್ ಗೆ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ಕುಟುಂಬಸ್ಥರು ಮಾಡಿದ್ದಾರೆ.
ಸಾಲಗಾರರ ಕಿರುಕುಳವನ್ನು ಸಹಿಸಲಾಗದೆ ನಿನ್ನೆ ಸಂಜೆ ನೇಣು ಬಿಗಿದುಕೊಂಡು ಆತ್ಮ,ಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹುಳಿಮಾವು ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೆಂಟ್ ಜಾನ್ಸ್ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.