ಬೆಂಗಳೂರು: ವೀಕೆಂಡ್ ಕರ್ಫ್ಯೂ ಸಮಯದ ಗೊಂದಲದ ವಿಚಾರವಾಗಿ ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಓಮಿಕ್ರಾನ್ ನಿಯಂತ್ರಣದ ಸಲುವಾಗಿ ವೀಕೆಂಡ್ ಕರ್ಫ್ಯೂ ಜಾರಿ ಆಗಿದ್ದು, ಸೋಮವಾರ ಬೆಳಿಗ್ಗೆ 5 ಗಂಟೆಯ ತನಕ ವೀಕೆಂಡ್ ಕರ್ಫ್ಯೂ ಇರಲಿದೆ.
ಅಲ್ಲದೇ ಆದರ ಬಳಿಕ ಕರ್ಫ್ಯೂ ಮುಂದುವರಿಕೆಗೆ ಆಯಾ ಜಿಲ್ಲಾಧಿಕಾರಿಗಳಿಗೆ ಬಿಟ್ಟಿದ್ದು, ಪರಿಸ್ಥಿತಿ ನೋಡಿಕೊಂಡು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು. ಆದರೆ ಇಡೀ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮುಂದುವರೆಯುವುದು ಸ್ಪಷ್ಟವಾಗಿಲ್ಲ, ಸಿಎಂ ಕೆಲವು ಜಿಲ್ಲೆಗಳಿಗೆ ಈ ಬಗ್ಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಆಯಾ ಜಿಲ್ಲಾಧಿಕಾರಿಗಳ ನಿರ್ಧಾರ ಅಂತಿಮ ಆಗಿರುತ್ತದೆ ಎಂದು ಸಚಿವ ಸುಧಾಕರ್ ಹೇಳಿಕೆ ನೀಡಿದ್ದಾರೆ.
