ಬೆಂಗಳೂರು: ಕೈಗಾರಿಕಾ ಉದ್ದೇಶಗಳಿಗೆ ಹಂಚಿಕೆಯಾದ ಭೂಮಿಯನ್ನು 10 ವರ್ಷಗಳ ಅವಧಿಯ ಭೋಗ್ಯ ಮತ್ತು ಮಾರಾಟಕ್ಕೆ ನೀಡಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ನಿರ್ಧಾರ ಮಾಡಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುರುಗೇಶ್ ನಿರಾಣಿ,ಕೈಗಾರಿಕಾ ಉದ್ದೇಶಗಳಿಗೆ ಹಂಚಿಕೆಯಾದ 2 ಎಕರೆಗೂ ಹೆಚ್ಚಿನ ಭೂಮಿಯನ್ನು 10 ವರ್ಷಗಳ ಅವಧಿಯ ಭೋಗ್ಯ ಮತ್ತು ಮಾರಾಟಕ್ಕೆ ನಿರ್ಧರಿಸಲಾಗಿದೆ. ಇನ್ನೂ ಅಸ್ತಿತ್ವದಲ್ಲಿರುವ ನೀತಿಯಿಂದಾಗಿ ರಾಜ್ಯದಲ್ಲಿ ಹೂಡಿಕೆ ಮಾಡಲು ಕೈಗಾರಿಕೆಗಳ ಕಾಳಜಿ ಮತ್ತು ಅನೇಕ ಹೂಡಿಕೆದಾರರ ಹಿಂಜರಿಕೆಯನ್ನು ಪರಿಹರಿಸಿ,
ಕೆಐಎಡಿಬಿ ಭವಿಷ್ಯದಲ್ಲಿ ಎಲ್ಲಾ ಜಮೀನುಗಳನ್ನು ಖಾಸಗಿ ಕೈಗಾರಿಕೆಗಳು 10 ವರ್ಷಗಳ ಗುತ್ತಿಗೆ ಕಮ್ ಮಾರಾಟದ ಆಧಾರದ ಮೇಲೆ ಹಂಚಲಿದೆ. ಕೆಐಎಡಿಬಿ ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ಬಂಡವಾಳ ಹೂಡಿಕೆದಾರರು ಮತ್ತು ಕೈಗಾರಿಕೋದ್ಯಮಿಗಳು ರಾಜ್ಯದಲ್ಲಿ ಸುಲಲಿತ ವಹಿವಾಟು ನಡೆಸಲು ಅನುಕೂಲವಾಗುವಂತೆ ಶೀಘ್ರದಲ್ಲೇ ಹೊಸ ನೀತಿ ನಿಯಮಗಳನ್ನು ರೂಪಿಸಲಾಗುವುದು ಎಂದು ಸಚಿವ ನಿರಾಣಿ ಮಾಹಿತಿ ನೀಡಿದ್ದಾರೆ.
