ಸುವರ್ಣಸೌಧ:- ಬಿಜೆಪಿ ಮುಖಂಡರಾದ ಮಣಿಕಂಠ ರಾಥೋಡ್, ವಿಜಯೇಂದ್ರ ವಿರುದ್ಧ ಮಾನನಷ್ಟ ಕೇಸ್ ಹಾಕುವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಅವರ ಮೇಲೆ ನಾನು ಹಲ್ಲೆ ನಡೆಸಿದ್ದೇನೆ ಎಂದು ಆರೋಪಿಸಿದ ಮಣಿಕಂಠ ರಾಥೋಡ್ ಹಾಗೂ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಂದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಮಣಿಕಂಠ ರಾಥೋಡ್ ಅವರು ಕಳೆದ ನ.19ರಂದು ತಮ್ಮ ಮೇಲೆ ಹಲ್ಲೆಯಾಗಿದೆ, ಅದಕ್ಕೆ ಸರ್ಕಾರದ ಅಧಿಕಾರಗಳು ಹಾಗೂ ರಾಜಕೀಯ ವಿರೋಧಿಗಳು ಕಾರಣ ಎಂದು ಆರೋಪಿಸಿ ದೂರು ನೀಡಿದ್ದರು. ಆದರೆ, ಈಗ ಅದರ ವಿಧಿವಿಜ್ಞಾನ ವರದಿ ಬಂದಿದ್ದು, ಮಣಿಕಂಠ ರಾಥೋಡ್ ಅವರು ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತಕ್ಕೀಡಾದಾಗ ಅವರಿಗೆ ಗಾಯಗಳಾಗಿವೆ. ಅವರ ಮೇಲೆ ಯಾರೂ ಹಲ್ಲೆ ಮಾಡಿಲ್ಲ ಎಂದು ತಿಳಿದುಬಂದಿದೆ.
ಆದರೆ, ಅವರ ಮೇಲೆ ನಾನು ಹಲ್ಲೆ ಮಾಡಿದ್ದೇನೆ ಎಂದು ಮಣಿಕಂಠ ರಾಥೋಡ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್. ಅಶೋಕ್ ಸೇರಿದಂತೆ ಹಲವು ಆರೋಪಿಸಿದ್ದರು. ಹೀಗೆ ನನ್ನ ತೇಜೋವಧೆ ಮಾಡಲು ನನ್ನ ವಿರುದ್ಧ ಆರೋಪ ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ. ಈ ಕುರಿತು ವಕೀಲರೊಂದಿಗೆ ಚರ್ಚಿಸುತ್ತೇನೆ ಎಂದರು.