ಬೆಂಗಳೂರು:- ಗಾಂಧೀಜಿ ಬಗ್ಗೆ ಅಪಪ್ರಚಾರ ಮಾಡಿದ ಹಿನ್ನೆಲೆ ಹಿಂದೂ ಕಾರ್ಯಕರ್ತೆ ವಿರುದ್ಧ ಪ್ರಕರಣ ದಾಖಲಾಗಿದೆ.
ಭೂ ಪರಿವರ್ತನೆ ಎಂದರೇನು? ಕೃಷಿಯೇತರ ಉದ್ದೇಶಕ್ಕಾಗಿ ಮಾಡುವ ಈ ವಿಧಾನದ ಬಗ್ಗೆ ನಿಮಗೆಷ್ಟು ಗೊತ್ತು?
ಕೆಲವು ದಿನಗಳ ಹಿಂದೆ ಉಡುಪಿಯ ಪೂರ್ಣಪ್ರಜ್ಞ ಸಭಾಂಗಣದಲ್ಲಿ ನಡೆದ ವಿಶ್ವಾರ್ಪಣಂ ಕಾರ್ಯಕ್ರಮದಲ್ಲಿ ಡೆಹ್ರಾಡೂನ್ ಚಿಂತಕಿ ಮೀನಾಕ್ಷಿ ಭಾಗವಹಿಸಿದ್ದರು. ಈ ವೇಳೆ ತಮ್ಮ ಭಾಷಣದಲ್ಲಿ ಬಾಂಗ್ಲಾ ಪಾಠ ಎಂಬ ವಿಷಯದ ಬಗ್ಗೆ ಹಿಂದಿಯಲ್ಲಿ ಮಾತನಾಡಿದ್ದ ಮೀನಾಕ್ಷಿ, ಜಿನ್ನಾ ಜೊತೆ ಸೇರಿಕೊಂಡು ಮಹಾತ್ಮ ಗಾಂಧಿ ಪಾಕಿಸ್ತಾನಕ್ಕೆ ಜನ್ಮ ನೀಡಿದ್ದಾರೆ. ಗಾಂಧೀಜಿ ಹಿಂದೂಗಳನ್ನು ದುರ್ಬಲಗೊಳಿಸಲು ಅಹಿಂಸೆಯನ್ನು ಪ್ರತಿಪಾದಿಸಿದ್ದಾರೆ. ಅವರನ್ನು ನಾವು ರಾಷ್ಟ್ರಪಿತ ಎಂದು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದರು.
ಈ ಹಿನ್ನೆಲೆಯಲ್ಲಿ ಬೇರೆ ಧರ್ಮಗಳ, ಗುಂಪುಗಳ ನಡುವೆ ವೈಮನಸ್ಸು, ದ್ವೇಷ, ಸಮಾಜದಲ್ಲಿ ಅಶಾಂತಿ ಹರಡುವ ರೀತಿಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ ಎಂದು ಉಡುಪಿಯ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಳ್ಳಲಾಗಿತ್ತು
ಈ ಬಗ್ಗೆ X ನಲ್ಲಿ ಸ್ಪಷ್ಟನೆ ಕೊಟ್ಟಿರುವ ಮೀನಾಕ್ಷಿ, “ನಾನು ‘ರಾಷ್ಟ್ರಪಿತ’ ಎಂದು ಕರೆಯಲ್ಪಡುವ ಗಾಂಧೀಜಿ ಬಗ್ಗೆ ಕೆಲವು ಕಾಮೆಂಟ್ಗಳನ್ನು ಮಾಡಿದ್ದರಿಂದ ನನ್ನ ವಿರುದ್ಧ ಕೇಸ್ ದಾಖಲಿಸಲಾಗಿದೆ. ಐತಿಹಾಸಿಕ ಸತ್ಯ ಸಂಗತಿಗಳನ್ನು ನನ್ನ ಭಾಷಣದಲ್ಲಿ ಹೇಳಿದ್ದಕ್ಕಾಗಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ನಾನು ಗಾಂಧೀಜಿ ಬಗ್ಗೆ ಮಾತನಾಡಿದ್ದಕ್ಕೆ ಕೇಸ್ ದಾಖಲಿಸಿದ್ದಾರೆ. ಆದರೆ, ವೀರ ಸಾವರ್ಕರ್, ಭಗತ್ ಸಿಂಗ್, ಭಗವಾನ್ ಶ್ರೀಕೃಷ್ಣ ಮತ್ತು ಶ್ರೀರಾಮನಂತಹ ಹಿಂದೂ ಹೋರಾಟಗಾರರು ಮತ್ತು ಹಿಂದೂ ದೇವರುಗಳನ್ನು ನಿಂದಿಸುವವರ ವಿರುದ್ಧ ಎಂದಿಗೂ ಪ್ರಕರಣಗಳನ್ನು ದಾಖಲಿಸಲಾಗುವುದಿಲ್ಲ ಎಂದು ಹಿಂದೂ ಕಾರ್ಯಕರ್ತೆ ಮೀನಾಕ್ಷಿ ಟೀಕಿಸಿದ್ದಾರೆ.