IPL ನಲ್ವತ್ತೆಂಟನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಅದರಂತೆ ನೂತನ ಪಾಯಿಂಟ್ಸ್ ಟೇಬಲ್ ಈ ಕೆಳಗಿನಂತಿದೆ…
Breaking: ವಾಟರ್ ಮ್ಯಾನ್ ಮೇಲೆ ಬಿಜೆಪಿ ಮುಖಂಡನ ಗೂಂಡಾ ವರ್ತನೆ ..!
ರಾಜಸ್ಥಾನ್ ರಾಯಲ್ಸ್ ಇದುವರೆಗೆ 9 ಪಂದ್ಯಗಳನ್ನಾಡಿದ್ದು, ಇದರಲ್ಲಿ 8 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 16 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.694.
9 ಪಂದ್ಯಗಳಲ್ಲಿ 6 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 12 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +1.096 ನೆಟ್ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ. ಆಡಿರುವ 10 ಪಂದ್ಯಗಳಲ್ಲಿ 6 ಜಯ ಸಾಧಿಸಿರುವ ಎಲ್ಎಸ್ಜಿ ಒಟ್ಟು 12 ಅಂಕಗಳೊಂದಿಗೆ +0.094 ನೆಟ್ ರನ್ ರೇಟ್ ಹೊಂದಿದೆ.
9 ಪಂದ್ಯಗಳಲ್ಲಿ 5 ಜಯ ಹಾಗೂ 4 ಸೋಲುಗಳೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 4ನೇ ಸ್ಥಾನದಲ್ಲಿದೆ. ಒಟ್ಟು 10 ಅಂಕ ಹೊಂದಿರುವ ಸಿಎಸ್ಕೆ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.810.
ಸನ್ರೈಸರ್ಸ್ ಹೈದರಾಬಾದ್ ತಂಡವು 9 ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು, ಇದೀಗ 10 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್ಆರ್ಹೆಚ್ ತಂಡದ ನೆಟ್ ರನ್ ರೇಟ್ +0.075.
10 ಮ್ಯಾಚ್ಗಳಲ್ಲಿ 4 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 8 ಅಂಕಗಳನ್ನು ಹೊಂದಿದ್ದು, ಈ ಮೂಲಕ 7ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.113
ಪಂಜಾಬ್ ಕಿಂಗ್ಸ್ ತಂಡವು 8ನೇ ಸ್ಥಾನದಲ್ಲಿದ್ದು, ಆಡಿರುವ 9 ಪಂದ್ಯಗಳಲ್ಲಿ 3 ಗೆಲುವು ಸಾಧಿಸಿ 6 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.187.
ಆರ್ಸಿಬಿ ತಂಡವು ಇದುವರೆಗೆ 10 ಪಂದ್ಯಗಳನ್ನಾಡಿದ್ದು, ಇದರಲ್ಲಿ 7 ಮ್ಯಾಚ್ನಲ್ಲಿ ಸೋತಿದೆ. ಇನ್ನು ಗೆದ್ದಿರುವ 3 ಮ್ಯಾಚ್ಗಳಿಂದ 6 ಅಂಕಗಳನ್ನು ಸಂಪಾದಿಸಿರುವ ಆರ್ಸಿಬಿ ಪಾಯಿಂಟ್ಸ್ ಟೇಬಲ್ನಲ್ಲಿ 10ನೇ ಸ್ಥಾನದಲ್ಲಿದೆ. ಆರ್ಸಿಬಿ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.415
![](https://ainlivenews.com/wp-content/uploads/2024/01/Ad-Banner-copy-scaled.jpg)