IPL ಸೀಸನ್ 17 ರ ಈ ಬಾರಿಯ ಪಾಯಿಂಟ್ಸ್ ಟೇಬಲ್ನ ಅಗ್ರಸ್ಥಾನದಲ್ಲಿ ರಾಜಸ್ಥಾನ್ ರಾಯಲ್ಸ್ ಕಾಣಿಸಿಕೊಂಡಿದೆ. ಅದರಂತೆ ನೂತನ ಅಂಕ ಪಟ್ಟಿಯಲ್ಲಿ ಯಾವ ತಂಡ ಯಾವ ಸ್ಥಾನದಲ್ಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ…
ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದೆ
NIA ಬಗ್ಗೆ ವದಂತಿ: ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ದೂರು ದಾಖಲು !
ಈ ಬಾರಿಯ ಐಪಿಎಲ್ನ ಮೊದಲ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಹ್ಯಾಟ್ರಿಕ್ ಗೆಲುವು ದಾಖಲಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ಒಟ್ಟು 6 ಅಂಕಗಳನ್ನು ಸಂಪಾದಿಸಿದೆ
ಇನ್ನು ನಾಲ್ಕು ಪಂದ್ಯಗಳಲ್ಲಿ 2 ಜಯ ಹಾಗೂ 2 ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೂರನೇ ಸ್ಥಾನದಲ್ಲಿದೆ
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ.
ಸನ್ರೈಸರ್ಸ್ ಹೈದರಾಬಾದ್ ತಂಡವು 4 ಪಂದ್ಯಗಳಲ್ಲಿ 2 ಜಯ ಸಾಧಿಸಿದ್ದು, ಇದೀಗ 4 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.
ಪಂಜಾಬ್ ಕಿಂಗ್ಸ್ ತಂಡವು 6ನೇ ಸ್ಥಾನದಲ್ಲಿದ್ದು, ಆಡಿರುವ 4 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿ 4 ಅಂಕಗಳನ್ನು ಸಂಪಾದಿಸಿದೆ.
ಆಡಿರುವ ನಾಲ್ಕು ಮ್ಯಾಚ್ಗಳಲ್ಲಿ 2 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 4 ಅಂಕಗಳನ್ನು ಹೊಂದಿದ್ದು, ಈ ಮೂಲಕ 7ನೇ ಸ್ಥಾನ ಅಲಂಕರಿಸಿದೆ.
ಆರ್ಸಿಬಿ ತಂಡವು ಇದುವರೆಗೆ 5 ಪಂದ್ಯಗಳನ್ನಾಡಿದ್ದು, ಇದರಲ್ಲಿ 4 ಮ್ಯಾಚ್ನಲ್ಲಿ ಸೋತಿದೆ. ಈ ಮೂಲಕ ಕೇವಲ 2 ಅಂಕ ಸಂಪಾದಿಸಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಕುಸಿದಿದೆ
ನಾಲ್ಕು ಪಂದ್ಯಗಳಲ್ಲಿ ಒಂದು ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಗಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -1.347 ನೆಟ್ ರನ್ ರೇಟ್ನೊಂದಿಗೆ 2 ಅಂಕ ಪಡೆದುಕೊಂಡಿದೆ
ಇನ್ನು ಆಡಿರುವ ಮೂರು ಪಂದ್ಯಗಳಲ್ಲೂ ಸೋಲನುಭವಿಸಿರುವ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ