ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸುವುದು ಮಾಜಿ ಸಿಎಂ ಯಡಿಯೂರಪ್ಪ (B.S Yediyurappa) ಹಾಗೂ ಅವರ ಮಗ ಬಿ.ವೈ ವಿಜಯೇಂದ್ರ (B.Y Vijayendra) ಅವರ ದಂಧೆಯಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ವಾಗ್ದಾಳಿ ನಡೆಸಿದ್ದಾರೆ.
Ayodhya Ram Mandir: ಇನ್ಮುಂದೆ ದೂರದರ್ಶನದಲ್ಲಿ ಬಾಲ ರಾಮನ ಬೆಳಗ್ಗಿನ ಪೂಜೆ ನೋಡಲು ಅವಕಾಶ!
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ (Lok Sabha Elections 2024) ಹಾಲಿ ಮೂವರು ಸಂಸದರಿಗೆ ಟಿಕೆಟ್ ಕೈ ತಪ್ಪುವ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಪೂಜ್ಯ ತಂದೆ – ಮಗ ಇಬ್ಬರೂ ಸೇರಿ ಬಿಜೆಪಿ (BJP) ಅಭ್ಯರ್ಥಿಗಳನ್ನು ಸೋಲಿಸುವುದು ಅವರ ಗುರಿಯಾಗಿದೆ. ಈ ಹಿಂದೆ ನನ್ನನ್ನು ಸೋಲಿಸಲು ಬಿ.ವೈ ವಿಜಯೇಂದ್ರ ಹಣ ಕಳುಹಿಸಿದ್ದ ಎಂದು ಕಿಡಿಕಾರಿದ್ದಾರೆ.
ಯಡಿಯೂರಪ್ಪ ಕುಟುಂಬದಲ್ಲಿ ಒಬ್ಬ ಮಗ ಕ್ಯಾಬಿನೆಟ್ ಮಂತ್ರಿಯಾಗಬೇಕು, ಇನ್ನೊಬ್ಬ ಮಗ ಮುಖ್ಯಮಂತ್ರಿಯಾಗಬೇಕು. ಇನ್ನೂ ಅವರ ಮನೆಯ ಕೆಲವು ಚಿಳ್ಳಿ ಮಿಳ್ಳಿ ಸದಸ್ಯರು ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಸದಸ್ಯರಾಗಬೇಕು. ಇದು ಯಡಿಯೂರಪ್ಪ ಅವರ ಕೊನೆಯ ಕನಸು ಎಂದು ವ್ಯಂಗ್ಯವಾಡಿದರು.