ವಿಜಯಪುರ;- ಜಿಪಿಟಿ ಶಿಕ್ಷಕರ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಶಿಕ್ಷಕರ ನೇಮಕಾತಿ ಆದೇಶ ನೀಡುವಂತೆ ವಿಜಯಪುರ ನಗರದ ಡಿಡಿಪಿಐ ಕಚೇರಿಯ ಎದುರು ಅಭ್ಯರ್ಥಿಗಳ ಪ್ರತಿಭಟನೆ ನಡೆಸಿದರು.
2022ನೇ ಸಾಲಿನ ಜಿಪಿಟಿ ಶಿಕ್ಷಕರ ನೇಮಕಾತಿಯಲ್ಲಿ ಸಾಮನ್ಯ ವರ್ಗ, ಕೆಟಗರಿಯಲ್ಲಿ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಅಲ್ಲದೇ, ಕೆಲವೊಂದು ಸಮಸ್ಯೆಗಳು ನಮಗೆ ತಿಳಿಸದೇ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೇಮಕಾತಿ ಆದೇಶ ಪ್ರತಿ ನೀಡುತ್ತಿಲ್ಲ ಎಂದು ಆರೋಪಿಸಿದರು.
ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅದಕ್ಕಾಗಿ ತಕ್ಷಣವೇ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು ಎಂದು ಡಿಡಿಪಿಐ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.