ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣೆಯ ದಿನಾಂಕ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ಪ್ರಕಟಗೊಳಿಸಿದೆ. ಒಟ್ಟು 70 ವಿಧಾನಸಭಾ ಕ್ಷೇತ್ರಗಳಿಗೆ ಫೆ.5ರಂದು ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ. ಫೆ.5ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಫೆ.8ರಂದು ಮತ ಎಣಿಕೆ ಮತ್ತು ಫಲಿತಾಂಶ ಘೋಷಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತರು ಸ್ಪಷ್ಟಪಡಿಸಿದರು.
ತುಳಸಿ ಗಿಡದ ಪಕ್ಕ ಈ ವಸ್ತು ಇಡಬೇಡಿ: ಶ್ರೀಮಂತನೂ ಕೂಡ ಕಡುಬಡವನಾಗುತ್ತಾನೆ!
ಇನ್ನು ವಿಧಾನಸಭೆ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ, ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ ಎಂದೂ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು. ಜ.18ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜ.20ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದೂ ಇದೇ ವೇಳೆ ರಾಜೀವ್ ಕುಮಾರ್ ತಿಳಿಸಿದರು.
85 ವರ್ಷ ಮೇಲ್ಪಟ್ಟ ವೃದ್ಧ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ನೀಡಲಾಗಿದೆ ಎಂದೂ ಮುಖ್ಯ ಚುನಾವಣಾ ಆಯುಕ್ತರು ತಿಳಿಸಿದರು. ದೆಹಲಿ ಒಟ್ಟು 70 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಅವುಗಳಲ್ಲಿ 12 ಮೀಸಲು ಕ್ಷೇತ್ರಗಳಾಗಿವೆ. ಮತದಾನಕ್ಕೆಂದು ಒಟ್ಟು 13,033 ಮತಗಟ್ಟೆಗಳನ್ನು ರಚಿಸಲಾಗಿದೆ ಎಂದು ರಾಜೀವ್ ಕುಮಾರ್ ಮಾಹಿತಿ ನೀಡಿದರು.