ಗುಜರಾತ್ ವಿರುದ್ಧದ ಗೆಲುವಿನ ಬಳಿಕ ಅಂಕಪಟ್ಟಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮೂರು ಸ್ಥಾನ ಮೇಲೆರಿದೆ. ಅಹಮದಾಬಾದ್ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ 17.3 ಓವರ್ಗಳಲ್ಲಿ 89 ರನ್ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು 8.5 ಓವರ್ಗಳಲ್ಲಿ ಚೇಸ್ ಮಾಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ನೆಟ್ ರನ್ ರೇಟ್ ಪಡೆಯುವಲ್ಲಿ ಯಶಸ್ವಿಯಾಗಿದೆ.
ಜೈ ಶ್ರೀರಾಮ್ ಎಂದ ಹಿಂದೂ ಯುವಕರ ಮೇಲೆ ಹಲ್ಲೆ ಕೇಸ್ – ಆರೋಪಿಗಳು ಅರೆಸ್ಟ್!
ಈ ನೆಟ್ ರನ್ ರೇಟ್ ನೆರವಿನೊಂದಿಗೆ ಒಟ್ಟು 6 ಅಂಕಗಳೊಂದಿಗೆ ಗುಜರಾತ್ ಟೈಟಾನ್ಸ್ ತಂಡವನ್ನು ಹಿಂದಿಕ್ಕಿ 6ನೇ ಸ್ಥಾನಕ್ಕೇರಿದೆ. ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡವು 9ನೇ ಸ್ಥಾನದಲ್ಲಿತ್ತು. ಇದೀಗ ಭರ್ಜರಿ ಗೆಲುವಿನೊಂದಿಗೆ 3 ಸ್ಥಾನ ಮೇಲೇರುವಲ್ಲಿ ಯಶಸ್ವಿಯಾಗಿದೆ.
ರಾಜಸ್ಥಾನ್ ರಾಯಲ್ಸ್ ಇದುವರೆಗೆ 7 ಪಂದ್ಯಗಳನ್ನಾಡಿದ್ದು, ಇದರಲ್ಲಿ 6 ಮ್ಯಾಚ್ನಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 12 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.677.
6 ಪಂದ್ಯಗಳಲ್ಲಿ 4 ಜಯ ಸಾಧಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 8 ಅಂಕಗಳನ್ನು ಸಂಪಾದಿಸಿದೆ. ಅಲ್ಲದೆ +1.399 ನೆಟ್ ರನ್ ಹೊಂದುವ ಮೂಲಕ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ.
ಇನ್ನು 6 ಪಂದ್ಯಗಳಲ್ಲಿ 4 ಜಯ ಹಾಗೂ 2 ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮೂರನೇ ಸ್ಥಾನದಲ್ಲಿದೆ. ಒಟ್ಟು 8 ಅಂಕ ಹೊಂದಿರುವ ಸಿಎಸ್ಕೆ ತಂಡದ ಪ್ರಸ್ತುತ ನೆಟ್ ರನ್ ರೇಟ್ +0.726
ಸನ್ರೈಸರ್ಸ್ ಹೈದರಾಬಾದ್ ತಂಡವು 6 ಪಂದ್ಯಗಳಲ್ಲಿ 4 ಜಯ ಸಾಧಿಸಿದ್ದು, ಇದೀಗ 8 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಪ್ರಸ್ತುತ ಎಸ್ಆರ್ಹೆಚ್ ತಂಡದ ನೆಟ್ ರನ್ ರೇಟ್ +0.502.
ಲಕ್ನೋ ಸೂಪರ್ ಜೈಂಟ್ಸ್ ತಂಡವು ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಆಡಿರುವ 6 ಪಂದ್ಯಗಳಲ್ಲಿ 3 ಜಯ ಸಾಧಿಸಿರುವ ಎಲ್ಎಸ್ಜಿ ಒಟ್ಟು 6 ಅಂಕಗಳೊಂದಿಗೆ +0.038 ನೆಟ್ ರನ್ ರೇಟ್ ಹೊಂದಿದೆ.
7 ಪಂದ್ಯಗಳಲ್ಲಿ 3 ಗೆಲುವು ದಾಖಲಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.074 ನೆಟ್ ರನ್ ರೇಟ್ನೊಂದಿಗೆ 6 ಅಂಕ ಪಡೆದುಕೊಂಡಿದೆ. ಅದರಂತೆ ಇದೀಗ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.
7 ಮ್ಯಾಚ್ಗಳಲ್ಲಿ 3 ಗೆಲುವು ದಾಖಲಿಸಿರುವ ಗುಜರಾತ್ ಟೈಟಾನ್ಸ್ ತಂಡವು 6 ಅಂಕಗಳನ್ನು ಹೊಂದಿದ್ದು, ಈ ಮೂಲಕ 7ನೇ ಸ್ಥಾನ ಅಲಂಕರಿಸಿದೆ. ಗುಜರಾತ್ ಟೈಟಾನ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -1.303.
ಪಂಜಾಬ್ ಕಿಂಗ್ಸ್ ತಂಡವು 8ನೇ ಸ್ಥಾನದಲ್ಲಿದ್ದು, ಆಡಿರುವ 6 ಪಂದ್ಯಗಳಲ್ಲಿ 2 ಗೆಲುವು ಸಾಧಿಸಿ 4 ಅಂಕಗಳನ್ನು ಸಂಪಾದಿಸಿದೆ. ಪಂಜಾಬ್ ಕಿಂಗ್ಸ್ ತಂಡದ ಪ್ರಸ್ತುತ ನೆಟ್ ರನ್ ರೇಟ್ -0.218.
6 ಪಂದ್ಯಗಳಲ್ಲಿ 2 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡವು 4 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ತಂಡದ ನೆಟ್ ರನ್ ರೇಟ್ -0.234.
ಆರ್ಸಿಬಿ ತಂಡವು ಇದುವರೆಗೆ 7 ಪಂದ್ಯಗಳನ್ನಾಡಿದ್ದು, ಇದರಲ್ಲಿ 6 ಮ್ಯಾಚ್ನಲ್ಲಿ ಸೋತಿದೆ. ಈ ಮೂಲಕ ಕೇವಲ 2 ಅಂಕ ಸಂಪಾದಿಸಿರುವ ಆರ್ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನಕ್ಕೆ ಕುಸಿದಿದೆ.