ನವದೆಹಲಿ:- ವಿಕಸಿತ ಭಾರತ ನಿರ್ಮಿಸುವಲ್ಲಿ ದೆಹಲಿಯ ಪಾತ್ರ ದೊಡ್ಡದು ಎಂದು PM ನರೇಂದ್ರ ಮೋದಿ ಹೇಳಿದ್ದಾರೆ.
ದೆಹಲಿಯಲ್ಲಿ ಎಎಪಿಗೆ ಸೋಲು: ಕೇಜ್ರಿವಾಲ್ ಮುಖವಾಡ ಕಳಚಿದೆ ಎಂದ ವಿಜಯೇಂದ್ರ!
ದೆಹಲಿ ಚುನಾವಣೆಯಲ್ಲಿ ಪಕ್ಷ ಬಹುಮತ ಪಡೆದ ವಿಚಾರವಾಗಿ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಿಜೆಪಿಗೆ (BJP) ನೀಡಿದ ಐತಿಹಾಸಿಕ ಜನಾದೇಶಕ್ಕಾಗಿ ದೆಹಲಿಯ ಪ್ರೀತಿಯ ಸಹೋದರ ಸಹೋದರಿಯರಿಗೆ ನಾನು ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೊಂಡಿದ್ದಾರೆ.
ದೆಹಲಿಯನ್ನು ಅಭಿವೃದ್ಧಿಗೆ, ಜನರ ಒಟ್ಟಾರೆ ಜೀವನ ಮಟ್ಟವನ್ನು ಸುಧಾರಣೆಗೆ ಮತ್ತು ವಿಕಸಿತ ಭಾರತವನ್ನು ನಿರ್ಮಿಸುವಲ್ಲಿ ದೆಹಲಿಯು ಪ್ರಮುಖ ಪಾತ್ರವಹಿಸುತ್ತದೆ. ಜನಶಕ್ತಿಯೇ ಸರ್ವಶ್ರೇಷ್ಠವಾದದ್ದು, ಅಭಿವೃದ್ಧಿ, ಉತ್ತಮ ಆಡಳಿತ ಗೆಲ್ಲುತ್ತದೆ ಎಂದು ಅವರು ಬರೆದುಕೊಂಡಿದ್ದಾರೆ.
ಪಕ್ಷದ ಕಾರ್ಯಕರ್ತರ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಅವರು ಈ ಅತ್ಯುತ್ತಮ ಫಲಿತಾಂಶಕ್ಕೆ ಕಾರಣರಾಗಿದ್ದಾರೆ. ನಾವು ಇನ್ನೂ ಹೆಚ್ಚು ಹುರುಪಿನಿಂದ ಕೆಲಸ ಮಾಡುತ್ತೇವೆ ಮತ್ತು ದೆಹಲಿಯ ಜನರಿಗೆ ಸೇವೆ ಸಲ್ಲಿಸುತ್ತೇವೆ ಎಂದು ಹೇಳಿಕೊಂಡಿದ್ದಾರೆ.