ಬೆಂಗಳೂರು:- ಬಾಕಿ ಇರುವ 3 ತಿಂಗಳ ಸಂಬಳ ಕೊಡುವಂತೆ ಆಗ್ರಹಿಸಿ 108 ಅಂಬುಲೆನ್ಸ್ ಸಿಬ್ಬಂದಿ ಹೋರಾಟಕ್ಕೆ ಮುಂದಾಗಿದ್ದಾರೆ.
BJPಯ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದಾರೆ: ಹೆಚ್.ಕೆ ಪಾಟೀಲ್
3 ತಿಂಗಳಿನಿಂದ ನಮಗೆ ಸಂಬಳ ಸಿಕ್ಕಿಲ್ಲ. ಹೀಗಾಗಿ ನ.16ರ ರಾತ್ರಿ 8 ಗಂಟೆಯ ಒಳಗಡೆ ಸಂಬಳವನ್ನು ಬಿಡುಗಡೆ ಮಾಡಬೇಕು. ಅಂದು ಸಂಬಳ ಪಾವತಿಯಾಗದೇ ಇದ್ದರೆ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಸುವರ್ಣ ಕರ್ನಾಟಕ ಆರೋಗ್ಯ ಕವಚ ನೌಕರರ ಸಂಘ, ಅಖಿಲ ಕರ್ನಾಟಕ 108 ಅಂಬುಲೆನ್ಸ್ ನೌಕರರ ಹಿತರಕ್ಷಣಾ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಕವಚ ಅಂಬುಲೆನ್ಸ್ ನೌಕರರರ ಸಂಘ ಎಚ್ಚರಿಕೆ ನೀಡಿದೆ.
ಆರೋಗ್ಯ ಕವಚ ಯೋಜನೆಯಲ್ಲಿ 2 ವರ್ಷಗಳಿಂದ ವೇತನದಲ್ಲಿ ಅನೇಕ ಸಮಸ್ಯಗಳಿವೆ. ಸರ್ಕಾರ, ಸಂಸ್ಥೆ ಮತ್ತು ಸಂಘಟನೆಗಳು ಸಭೆ ನಡೆಸಿದರೂ ವೇತನದ ಸಮಸ್ಯೆ ಬಗೆಹರಿದಿಲ್ಲ. ಸಂಘಟನೆಯ ವತಿಯಿಂದ ನ್ಯಾಯಾಲಯದ ಮೊರೆ ಹೋಗಲಾಗಿತ್ತು.
ನ್ಯಾಯಾಲಯವು ಸೆಪ್ಟೆಂಬರ್ 12ರಂದು ಮಧ್ಯಂತರ ಆದೇಶ ನೀಡಿತ್ತು. ನ್ಯಾಯಾಲಯ ಆದೇಶ ನೀಡಿದರೂ ಆರೋಗ್ಯ ಇಲಾಖೆ ಅಂಬುಲೆನ್ಸ್ ಸಿಬ್ಬಂದಿಯ ಸಂಬಳದ ಬಗ್ಗೆ ನಿರ್ಲಕ್ಷ್ಯ ತೋರಿದೆ. ಈ ಕಾರಣಕ್ಕೆ ಅನಿವಾರ್ಯವಾಗಿ ನಾವು ಹೋರಾಟ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಸಂಘಗಳು ತಮ್ಮ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿವೆ.