ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಕಚೇರಿಯಲ್ಲಿ 5 ಸಾವಿರ ಲಂಚ ಸ್ವೀಕರಿಸುವಾಗ ರೆವಿನ್ಯೂ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಜರುಗಿದೆ.
Kottur Manjunath: ಸಚಿವ ಸ್ಥಾನಕ್ಕಾಗಿ ಯಾರ ಮನೆಗೂ ಹೋಗಲ್ಲ: ಕೊತ್ತೂರು ಮಂಜುನಾಥ್!
ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯನ್ನು ಕಾಂತರಾಜ್ ಎಂದು ಗುರುತಿಸಲಾಗಿದೆ. ತರೀಕೆರೆ ತಾಲೂಕಿನ ಹುಣಸಘಟ್ಟ ನಾಡಕಚೇರಿ ರೆವಿನ್ಯೂ ಇನ್ಸ್ ಪೆಕ್ಟರ್ ಕಾಂತರಾಜ್ ಅವರು, ತಂದೆಯಿಂದ ಮಗನಿಗೆ ಖಾತೆ ಬದಲಿಸಲು 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಸಂಬಂಧ ದೂರು ಆಧರಿಸಿ ಲೋಕಾಯುಕ್ತ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ ನೇತೃತ್ವದಲ್ಲಿ ದಾಳಿ ನಡೆದಿದ್ದು, ಈ ವೇಳೆ ತರೀಕೆರೆ ತಾಲೂಕು ಕಚೇರಿಯಲ್ಲೇ ಕಾಂತರಾಜ್ ಸಿಕ್ಕಿಬಿದ್ದಿದ್ದಾನೆ.