ಬೆಂಗಳೂರು:- ಡಿಸೆಂಬರ್ 31ರಿಂದ ಸಾರಿಗೆ ಮಷ್ಕರ ಹಿನ್ನೆಲೆ, ಬೆಂಬಲ ನೀಡುವಂತೆ ಡ್ರೈವರ್, ಕಂಡಕ್ಟರ್ ಪ್ರಯಾಣಿಕರಿಗೆ ಸಾರಿಗೆ ಮುಖಂಡರು ಕರಪತ್ರ ಹಂಚಿದ್ದಾರೆ.
ಶೂಟಿಂಗ್ ವೇಳೆ ನಟಿಗೆ ಲೈಂಗಿಕ ಕಿರುಕುಳ: ಖ್ಯಾತ ನಟ ಹಾಗೂ ಯೂಟ್ಯೂಬರ್ ಅರೆಸ್ಟ್
ಡಿಸೆಂಬರ್ 31 ರಿಂದ ರಾಜ್ಯದಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ಬಸ್ಸುಗಳು ಸಂಚಾರ ಮಾಡುವುದು ಅನುಮಾನವಾಗಿದೆ.
ಜನವರಿ ಒಂದರಿಂದ ಬಸ್ ಸಂಚಾರ ಇರುವುದಿಲ್ಲ, ಸಹಕರಿಸಿ’ ಎಂದು ಪ್ರಯಾಣಿಕರಿಗೆ ಮತ್ತು ಸಾರಿಗೆ ನೌಕರರಿಗೆ ಬುಧವಾರ ಕರಪತ್ರ ಹಂಚಿಕೆ ಮಾಡಲಾಗಿದೆ. ಮೆಜೆಸ್ಟಿಕ್ ಬಸ್ ಸ್ಟ್ಯಾಂಡ್, ಡಿಪೋ-7 ವೋಲ್ವೋ ಬಸ್ ಡಿಪೋ, ಡಿಪೋ- 13 ಕತ್ರಿಗುಪ್ಪೆ, ಡಿಪೋ-20 ಬನಶಂಕರಿ ಸೇರಿದಂತೆ ಬಿಎಂಟಿಸಿ ಬಸ್ ಡಿಪೋಗಳಿಗೆ ತೆರಳಿ ಡಿಸೆಂಬರ್ 31 ರಿಂದ ಯಾರೂ ಕರ್ತವ್ಯ ನಿರ್ವಹಿಸಬಾರದು ಎಂದು ಕಂಡಕ್ಟರ್, ಡ್ರೈವರ್, ಮೆಕಾನಿಕ್ಗಳಿಗೆ ಸಾರಿಗೆ ಮುಖಂಡರು ಕರಪತ್ರ ಹಂಚಿದ್ದಾರೆ.
ಈ ವೇಳೆ ಮಾತನಾಡಿದ ಸಾರಿಗೆ ಮುಖಂಡರು, ಶಕ್ತಿ ಯೋಜನೆಯ ಬಾಕಿ ಹಣವೇ ಎರಡು ಸಾವಿರ ಕೋಟಿ ರೂಪಾಯಿಯಷ್ಟು ಇದೆ. ಅದನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.