ಬೆಂಗಳೂರು:– ಸರ್ಕಾರದ ವಿರುದ್ದ ಸಮರ ಸಾರಿರುವ ಸಾರಿಗೆ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಂದು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.
ಫ್ರೀಡಂಪಾರ್ಕ್ನಲ್ಲಿ ಉಪವಾಸ ಸತ್ಯಾಗ್ರಹ ನಡೆಯಲಿದೆ. ಸರ್ಕಾರದ ವಿರುದ್ದ ಸಾರಿಗೆ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಬೆಳಗ್ಗೆ 10:30 ರಿಂದ 5 ಗಂಟೆಯವರೆಗೆ ನೌಕರರ ಉಪವಾಸ ಸತ್ಯಾಗ್ರಹ ನಡೆಯಲಿದೆ.
ಸಾರಿಗೆ ನೌಕರರಿಗೆ ಜನವರಿ 1ರಿಂದ ಹೊಸ ಒಪ್ಪಂದದ ಪ್ರಕಾರ ವೇತನ ಪರಿಷ್ಕರಣೆ ಆಗಬೇಕು. ಆದರೆ ಇಲ್ಲಿಯವರೆಗೆ ವೇತನ ಪರಿಷ್ಕರಣೆ ವಿಚಾರವನ್ನು ಸಾರಿಗೆ ನಿಗಮಗಳು ಪ್ರಸ್ತಾಪಿಸಿಲ್ಲ. ಹೀಗಾಗಿ ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆಗಳನ್ನಿಟ್ಟು ನೌಕರರು ಪ್ರತಿಭಟನೆಗೆ ಸಜ್ಜಾಗಿದ್ದಾರೆ