ಬೆಂಗಳೂರು:- ನಂದಿನಿ ದೋಸೆ, ಇಡ್ಲಿ ಹಿಟ್ಟಿಗೆ ಬೇಡಿಕೆ ಹೆಚ್ಚಾಗಿದ್ದು, ಶೀಘ್ರವೇ ಕರ್ನಾಟಕದ ಹಲವೆಡೆ ಮಾರಾಟ ಮಾಡಲು ಯೋಜನೆ ರೂಪಿಸಲಾಗಿದೆ.
ಪರಿಚಾರಕನ ಭಕ್ತಿ: ಸಂತನ ನೆನಪಲ್ಲಿ 2 ಕ್ವಿಂಟಲ್ನಷ್ಟು `ಅನ್ನ ಸಂತರ್ಪಣೆ’!
ಬೆಂಗಳೂರಿನಲ್ಲಿ ಪ್ರಾಯೋಗಿಕವಾಗಿ ಆರಂಭಿಸಿರುವ ದೋಸೆ ಹಿಟ್ಟಿನ ಮಾರಾಟಕ್ಕೆ ಸಖತ್ ಬೇಡಿಕೆ ಸೃಷ್ಟಿಯಾದ್ದು, ಶೀಘ್ರದಲ್ಲೇ ಇತರೆ ಜಿಲ್ಲೆಗಳಿಗೂ ದೋಸೆ ಹಿಟ್ಟಿನ ವ್ಯಾಪಾರ ವಿಸ್ತರಿಸಲು ಕೆಎಂಎಫ್ ಸಜ್ಜಾಗುತ್ತಿದೆ.
ಸದ್ಯ ಕೆಎಂಎಫ್ ಬೆಂಗಳೂರಿನಲ್ಲಿ ಮಾತ್ರ ಪ್ರಾಯೋಗಿಕವಾಗಿ ದೋಸೆ ಹಿಟ್ಟಿನ ಮಾರಾಟ ಆರಂಭಿಸಿದೆ. ಇದೀಗ ರಾಜಧಾನಿಯಲ್ಲಿ ಉತ್ತಮ ಸ್ಪಂದನೆ ಸಿಗುತ್ತಿದ್ದಂತೆಯೇ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಶೀಘ್ರದಲ್ಲೇ ದೋಸೆ-ಇಡ್ಲಿ ಹಿಟ್ಟಿನ ಮಾರಾಟ ಮಾಡಲು ನಿರ್ಧಾರ ಮಾಡಿದೆ. ಇತ್ತ ನಂದಿನಿ ಪರಿಚಯಿಸಿರುವ ದೋಸೆ ಹಿಟ್ಟಿನಲ್ಲಿ ವೇ ಪ್ರೊಟೀನ್ ಕೂಡ ಇರುವುದರಿಂದ ಸದ್ಯ ಜಿಮ್, ಡಯಟ್ ಬಗ್ಗೆ ಗಮನಹರಿಸುವವರು ಕೂಡ ನಂದಿನಿ ಹಿಟ್ಟಿನ ಮೊರೆಹೋಗುತ್ತಿದ್ದಾರೆ.
ಮುಂದಿನ ಒಂದು ವಾರದೊಳಗಾಗಿ ಇತರೆ ಜಿಲ್ಲೆಗಳಲ್ಲೂ ದೋಸೆ, ಇಡ್ಲಿ ಹಿಟ್ಟು ಮಾರಾಟ ಆರಂಭಿಸುವುದಾಗಿ ಕೆಎಂಎಫ್ ಸುಳಿವು ನೀಡಿದೆ.