ಬೆಂಗಳೂರು: BSY ವಿರುದ್ಧ ತನಿಖೆ ಮಾಡಬೇಕು ಎನ್ನುವುದು ದ್ವೇಷದ ರಾಜಕಾರಣ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರ ಮೇಲೆ ಸಚಿವ ಸಂಪುಟ ಸಭೆಯಲ್ಲಿ ತನಿಖೆ ಆಗಬೇಕು ಎಂಬ ಪ್ರಯತ್ನ ಮಾಡಿರುವುದು ಖಂಡನೀಯ. ಅಲ್ಲದೇ ತನಿಖೆ ಮಾಡಬೇಕು ಎನ್ನುವುದು ದ್ವೇಷದ ರಾಜಕಾರಣ. ದ್ವೇಷದ ರಾಜಕೀಯ ಕೈಬಿಟ್ಟು ನಿಮ್ಮ ಆಡಳಿತ ಹೇಗೆ ಉತ್ತಮ ಮಾಡುವುದು ಎಂಬ ಬಗ್ಗೆ ಯೋಚಿಸಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಅಂಚೆ ಕಚೇರಿಯಲ್ಲಿ “ಪ್ರೀಮಿಯಂ ಉಳಿತಾಯ ಖಾತೆ” ತೆರೆಯುವುದು ಹೇಗೆ.? ಪ್ರಯೋಜನಗಳೇನು.? ಇಲ್ಲಿದೆ ಮಾಹಿತಿ
ನಿಮ್ಮ ಸರ್ಕಾರದಲ್ಲಿ ಬೆಳಗ್ಗೆ ಎದ್ದರೆ ಭ್ರಷ್ಟಾಚಾರ, ಸರ್ಕಾರಿ ಅಧಿಕಾರಿಗಳ ಆತ್ಮಹತ್ಯೆ ಆಗುತ್ತಿದೆ. ಈಗಾಗಲೇ ನಮ್ಮ ಮೇಲೆ ತನಿಖೆಗೆ ಸಾಕಷ್ಟು ಆಯೋಗಗಳು, ಎಸ್ಐಟಿಗಳು ಎಲ್ಲಾ ಆಗಿವೆ. ಮತ್ತೆ ಮತ್ತೆ ಮರು ಪ್ರಯತ್ನ ಮಾಡುವ ಬದಲು ನಿಮ್ಮಲ್ಲಿ ಭ್ರಷ್ಟಾಚಾರವನ್ನು ಸರಿಪಡಿಸಬೇಕು ಎಂದು ಕ್ರಮ ವಹಿಸಿ ಎಂದು ಕಿಡಿಕಾರಿದ್ದಾರೆ.