ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಹೆಚ್ಚಾಗಿದ್ದು, ಅದರಂತೆ ಬೆಂಗಳೂರಲ್ಲೇ ಪ್ರಕರಣ ಹೆಚ್ಚಾಗಿದೆ
ಕರ್ನಾಟಕದಲ್ಲಿ ಈ ವಾರದಿಂದ ಮಳೆ ಜೋರು.. 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಪತ್ತೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯು ಈ ವರ್ಷ ಈಗಾಗಲೇ 87 ಸಾವಿರಕ್ಕೂ ಅಧಿಕ ಡೆಂಗ್ಯೂ ಶಂಕಿತರನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದು ‘ಪ್ರಜಾವಾಣಿ’ ವರದಿ ಮಾಡಿದೆ. ಅವರಲ್ಲಿ 39 ಸಾವಿರಕ್ಕೂ ಅಧಿಕ ಮಂದಿಯ ರಕ್ತದ ಮಾದರಿ ಪರೀಕ್ಷೆ ಮಾಡಲಾಗಿದೆ. ಈವರೆಗೆ ವರದಿಯಾದ ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 4,886ಕ್ಕೆ ತಲುಪಿದೆ. ಕಳೆದ ತಿಂಗಳು ಈ ವೇಳೆ ಒಟ್ಟು 2,877 ಪ್ರಕರಣಗಳು ವರದಿಯಾಗಿದ್ದವು..
2023ರಲ್ಲಿ 16,500ಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ದೃಢಪಟ್ಟಿದ್ದವು. 9 ಮಂದಿ ಮೃತಪಟ್ಟಿದ್ದರು ಎಂದು ವರದಿ ತಿಳಿಸಿದೆ. ಜೂನ್ ಬಳಿಕ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆಯಾಗಿತ್ತು. ಈ ವರ್ಷವೂ ಜೂನ್ನಲ್ಲಿ ಏರಿಕೆ ಕಂಡಿದೆ.