ಹಾಸನ:– ಹಾಸನ ತಾಲ್ಲೂಕಿನ, ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿ ಡೆಂಗ್ಯು ಜ್ವರದ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಜರುಗಿದೆ.
13 ವರ್ಸಾದ ಅಕ್ಷತಾ ಮೃತಪಟ್ಟ ಬಾಲಕಿ. ಹಾಸನದ ಖಾಸಗಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಅಕ್ಷತಾ, ಕೂಲಿ ಕೆಲಸ ಮಾಡುವ ಅಪ್ಪಣ್ಣಶೆಟ್ಟಿ ಹಾಗೂ ಪದ್ಮ ದಂಪತಿ ಪುತ್ರಿ. ಕಳೆದ ಬುಧವಾರ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಬೊಮ್ಮನಾಯಕಹಳ್ಳಿ ಗ್ರಾಮದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಅಕ್ಷತಾ ಪೋಷಕರು ಚಿಕಿತ್ಸೆ ಕೊಡಿಸಿದ್ದರು. ಅರಕಲಗೂಡು ತಾಲ್ಲೂಕಿನ ದೊಡ್ಡಮಗ್ಗೆ ಗ್ರಾಮದವರಾದ ಅಕ್ಷತಾಳ ಪೋಷಕರು ಕೂಲಿ ಕೆಲಸ ಮಾಡುವ ಬಡವರಾಗಿದ್ದಾರೆ.
ಗುಣಮಖಳಾಗದಿದ್ದಾಗ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೂ ಚೇತರಿಸಿಕೊಳ್ಳದ ಅಕ್ಷತಾಳನ್ನು ನಂತರ ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿ ಸ್ಥಿತಿ ಗಂಭೀರವಾಗುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ಖಾಸಗಿ ಆಸ್ಪತ್ರೆ ವೈದ್ಯರು ಹೇಳಿದ್ದರು. ಬಳಿಕ ಪೋಷಕರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.