ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಹಾವಳಿ ಮಿತಿ ಮೀರುತ್ತಿದ್ದು, ಬೆಂಗಳೂರಿನಲ್ಲಿ ಪ್ರತಿ 2 ಗಂಟೆಗೆ ಇಬ್ಬರಲ್ಲಿ ಡೆಂಗ್ಯೂ ಲಕ್ಷಣಗಳು ಪತ್ತೆಯಾಗುತ್ತಿವೆ. ಕಳೆದ 6 ತಿಂಗಳಲ್ಲಿ 6 ಸಾವಿರದ 900ಕ್ಕೂ ಹೆಚ್ಚು ಜನ ಡೆಂಗ್ಯೂ ಟೆಸ್ಟ್ಗೆ ಒಳಗಾಗಿದ್ದಾರೆ. ಈ ಪೈಕಿ 2457 ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ.
ಛೇ ಇವರಂಥಾ ನೀಚ ದಂಪತಿ.. ತಮ್ಮ 2 ವರ್ಷದ ಮಗಳನ್ನೇ ಲೈಂಗಿಕ ಕ್ರಿಯೆಗಾಗಿ ಮಾರಲು ಯತ್ನ..!
ಬೆಂಗಳೂರು ಪೂರ್ವ ವಲಯದಲ್ಲಿ ಓರ್ವ ವೃದ್ಧ, ಓರ್ವ ಯುವಕನನ್ನ ಡೆಂಗ್ಯೂ ಬಲಿ ಪಡೆದಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣಗಳ ಹೆಚ್ಚಳ ಆತಂಕ ಮೂಡಿಸಿದೆ.
ರೋಗವನ್ನು ತ್ವರಿತವಾಗಿ ಪತ್ತೆ ಹಚ್ಚಲು ಪಾಲಿಕೆಯಿಂದ ಇದೀಗ ಸಾಧ್ಯವಾಗುತ್ತಿಲ್ಲ. ಯಾಕೆಂದರೆ, ನಗರದ ಆರೋಗ್ಯ ಕೇಂದ್ರಗಳಲ್ಲಿ ಡೆಂಗ್ಯೂ ಟೆಸ್ಟಿಂಗ್ಗೆ ಬೇಕಾದ ಎನ್ಎಸ್1 ಕಿಟ್ಗಳೇ ಸಾಕಷ್ಟು ಇಲ್ಲವಂತೆ. ಆಸ್ಪತ್ರೆಗಳಲ್ಲಿ ನಿತ್ಯ 200 ರಿಂದ 250 ಟೆಸ್ಟ್ ಮಾತ್ರ ಮಾಡಲಾಗುತ್ತಿದೆ. ಇದೀಗ, ಯುದ್ಧಕಾಲದಲ್ಲಿ ಶಸ್ತ್ರಾಭ್ಯಾಸ ಎಂಬಂತೆ, 30 ಸಾವಿರ ಟೆಸ್ಟಿಂಗ್ ಕಿಟ್ ಪೂರೈಸುವಂತೆ ಕೆಎಸ್ಎಂಸಿಗೆ ಪಾಲಿಕೆ ಬೇಡಿಕೆ ಇಟ್ಟಿದೆ. ಈ ಬಗ್ಗೆ ಬಿಬಿಎಂಪಿ ಆರೋಗ್ಯ ಇಲಾಖೆ ವಿಶೇಷ ಆಯುಕ್ತ ಸೂರಲ್ಕರ್ ವಿಕಾಸ್ ಕಿಶೋರ್ ಮಾಹಿತಿ ನೀಡಿದ್ದಾರೆ. ಮತ್ತೊಂದೆಡೆ ಗದಗ, ಚಿತ್ರದುರ್ಗ, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ
ತುಮಕೂರು ಜಿಲ್ಲೆಯಲ್ಲಿ ಆರೇ ತಿಂಗಳಲ್ಲಿ 170 ಪ್ರಕರಣಗಳು ಪತ್ತೆಯಾಗಿದ್ದರೆ, ಗದಗದಲ್ಲಿ ಇದೇ ತಿಂಗಳಲ್ಲಿ ಒಟ್ಟು 31 ಮಕ್ಕಳಿಗೆ ಡೆಂಗ್ಯೂ ಶಂಕೆ ವ್ಯಕ್ತವಾಗಿದೆ. ಇನ್ನು ಮಂಡ್ಯದಲ್ಲಿ ಎರಡು ತಿಂಗಳಲ್ಲಿ 150ಕ್ಕೂ ಹೆಚ್ಚು ಜನರಿಗೆ ಡೆಂಗ್ಯೂವಕ್ಕರಸಿಕೊಂಡಿದೆ.